• first
  second
  third
  previous arrow
  next arrow
 • SSLC ಪರೀಕ್ಷೆ ಫಲಿತಾಂಶ; ಬಿಸಲಕೊಪ್ಪ ಶಾಲೆಗೆ ಭರತ್ ಪ್ರಥಮ

  300x250 AD

  ಶಿರಸಿ: 2020-21ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸೂರ್ಯನಾರಾಯಣ ಪ್ರೌಢಶಾಲೆ ಬಿಸಲಕೊಪ್ಪ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 58 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಕೀರ್ತಿ ತಂದಿದ್ದಾರೆ.

  300x250 AD


  ಭರತ್ ಚಂದ್ರು ಪೂಜಾರಿ 93.76 ಶೇಕಡಾ ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಸಿಂಚನಾ ಪೂಜಾರಿ ದ್ವಿತೀಯ ಸ್ಥಾನವನ್ನು ಹಾಗು ಮೇಘನಾ ಗೌಡ ತೃತೀಯ ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಭಾಗದ ಶಾಲೆ ಆಗಿ ಉತ್ತಮ ಸಾಧನೆ ಮಾಡಿದ್ದಕ್ಕೆ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪಾಲಕರ, ಆಡಳಿತ ಮಂಡಳಿ ಸದಸ್ಯರ ಸಹಕಾರ ಶಿಕ್ಷಕರ ಜೊತೆಗೆ ಇದ್ದ ಕಾರಣ ಇದು ಸಾಧ್ಯವಾಯಿತು ಎಂದು ಮುಖ್ಯಾಧ್ಯಾಪಕ ಗಣೇಶ ಭಟ್ಟ ವಾನಳ್ಳಿ ತಿಳಿಸಿದರು.

  Share This
  300x250 AD
  300x250 AD
  300x250 AD
  Back to top