• Slide
    Slide
    Slide
    previous arrow
    next arrow
  • ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಸಂಚಾಲಕರಾಗಿ ದಶರಥ ಬಂಡಿವಡ್ಡರ ಆಯ್ಕೆ

    300x250 AD

    ದಾಂಡೇಲಿ: ಬಿಜೆಪಿ ಸಾಮಾಜಿಕ ಜಾಲತಾಣದ ಉತ್ತಕ ಕನ್ನಡ ಜಿಲ್ಲಾ ಸಂಚಾಲಕರಾಗಿ ನಗರಸಭೆಯ ಸದಸ್ಯ ದಶರಥ ಬಂಡಿವಡ್ಡರ ಅವರನ್ನು ನೇಮಕ ಮಾಡಲಾಗಿದೆ.
    ದಶರಥ ಬಂಡಿವಡ್ಡರ ಅವರು ಈ ಹಿಂದೆ ಬಿಜೆಪಿ ಯುವ ಮೋರ್ಚಾದ ದಾಂಡೇಲಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ನಂತರ ಬಿಜೆಪಿ ಎಸ್‌ಸಿ ಮೋರ್ಚಾದ ದಾಂಡೇಲಿ ಘಟಕದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದರು. ಬಿಜೆಪಿ ಪಕ್ಷದಲ್ಲಿ ಕಳೆದ ಅನೇಕ ವರ್ಷಗಳಿಂದ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅವರು ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ನೇಮಕಗೊಳಿಸಿದ್ದಾರೆ.
    ಪಕ್ಷದ ಹಿರಿಯ, ಕಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು, ಅಭಿವೃದ್ಧಿ ಕಾರ್ಯಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯವನ್ನು ನಿಷ್ಠೆಯಿಂದ ನಿಭಾಯಿಸುವುದಾಗಿ ದಶರಥ ಬಂಡಿವಡ್ಡರ ಅವರು ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top