Slide
Slide
Slide
previous arrow
next arrow

ಮಕ್ಕಳ ಹಬ್ಬ-2022: ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

300x250 AD

ಸಿದ್ದಾಪುರ: ತಾಲೂಕಿನ ಬಿಳಗಿ ಸಮಿಪದ ವಿದ್ಯಾಗಿರಿಯ ಶ್ರೀರಮಾನಂದ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ಸುಧಾ ಹೆಗಡೆ ರಂಗವೇದಿಕೆಯಲ್ಲಿ ಮಕ್ಕಳ ಹಬ್ಬ- 2022 ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮ ನಡೆಯಿತು.
ಹಿರಿಯರಾದ ರಾಮನಾಥ ಹೆಗಡೆ ತಲಕೆರೆ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಶ್ರೀಪಾದ್ ಭಟ್ ಕೊರ್ಸೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಭಾಷಣಕಾರರಾಗಿ ರಾಜ್ಯ ಸಂಪನ್ಮೂಲ ವ್ಯಕ್ತಿ ಶಂಕರ್ ಶಾಸ್ತ್ರಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಜಿ.ಎನ್.ಹೆಗಡೆ ತಲೆಕೆರೆ, ಇಟಗಿ ಗ್ರಾಮ ಪಂಚಾಯತ ಅಧ್ಯಕ್ಷ ಸುರೇಂದ್ರ ಗೌಡ, ಬಿಳಗಿ ಗ್ರಾಮ ಪಂಚಾಯತ ಅಧ್ಯಕ್ಷೆ ಮಾಲಿನಿ ಮಡಿವಾಳ, ವಾಜಗೋಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಚಂದ್ರಕಲಾ ಎಸ್.ನಾಯ್ಕ, ಸದಸ್ಯ ಕೃಷ್ಣಮೂರ್ತಿ ನಾಯ್ಕ ಐಸೂರು ಮೊದಲಾದವರು ಉಪಸ್ಥಿತರಿದ್ದರು.
ಸ್ಫರ್ಧಾ ವಿಜೇತ ಮಕ್ಕಳಿಗೆ ಮತ್ತು ಪಾಲಕರಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಬಹು ಆಕರ್ಷಿತ ಕರಾಟೆ, ಯೋಗ, ಯಕ್ಷಗಾನ, ಭರತನಾಟ್ಯ, ಜಾದು, ಲೈವ್ ಚಿತ್ರಕಲೆಯನ್ನು ಕೂಡ ಪ್ರದರ್ಶಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿಯಾದ ಪ್ರಸನ್ನ ಹೆಗಡೆ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಟ್ರಸ್ಟಿಗಳಾದ ಮಹಾಬಲೇಶ್ವರ ಹೆಗಡೆ ಮಾತನಾಡಿದರು. ಶ್ರೀರಮಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸೌಮ್ಯ ಭಂಡಾರಿ ವರದಿ ವಾಚನ ಮಾಡಿದರು. ಟ್ರಸ್ಟಿಗಳಾದ ತನುಜಾ ಹೆಗಡೆ ವಂದಿಸಿದರು. ರೇಣುಕಾ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

300x250 AD
Share This
300x250 AD
300x250 AD
300x250 AD
Back to top