ಕಾರವಾರ: ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಆ.14 ರಂದು ಮೆಗಾ ಲೋಕ ಅದಾಲತ್ ನಡೆಯಲಿದೆ.
ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಆಸ್ತಿ ಹಕ್ಕು ವಿಭಾಗಕ್ಕೆ ಸಂಬಂಧಿಸಿದ ದಾವೆ, ಮೋಟಾರು ವಾಹನ ಅಪಘಾತಕ್ಕೆ ಸಂಬಂಧಿಸಿದ ಪರಿಹಾರ ಅರ್ಜಿ, ಲೇವಾದೇವಿ ವ್ಯವಹಾರ, ಕೌಟಂಬಿಕ ಕಲಹ, ಚೆಕ್ಕು ಅಮಾನ್ಯ ಪ್ರಕರಣ ಹಾಗೂ ಕೆಲವೊಂದು ಕ್ರಿಮಿನಲ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಮಾರ ಶೆಟ್ಟಿ ಎನ್. ತಿಳಿಸಿದ್ದಾರೆ.