Slide
Slide
Slide
previous arrow
next arrow

ಸಮಾಜಶಾಸ್ತ್ರ ಅಧ್ಯಯನ ಸಮಾಜ ನಿರ್ಮಾಣಕ್ಕೆ ಪೂರಕ: ಡಿ.ಕೆ.ನಾಯ್ಕ

300x250 AD

ಅಂಕೋಲಾ: ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ಪಿ.ಎಂ ಸಂಯುಕ್ತ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಕಾರ್ಯಗಾರ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಸಮಾಜಶಾಸ್ತ್ರ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಡಿ.ಕೆ.ನಾಯ್ಕ, ವಿದ್ಯಾರ್ಥಿಗಳು ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುವುದರಿಂದ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ ಎಂದರು. ಅನವಟ್ಟಿ ಸರ್ಕಾರಿ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಬಿ.ಗಣಪತಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಪದವಿಪೂರ್ವ ಕಾಲೇಜುಗಳ ಸಮಾಜಶಾಸ್ತ್ರದ ಉಪನ್ಯಾಸಕರೇ ನಿಜವಾದ ಸಮಾಜಶಾಸ್ತ್ರಜ್ಞರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಕ್ರಮ ಪಿ.ನಾಯ್ಕರವರು ಐದು ಸಾವಿರ ರೂಪಾಯಿಗಳ ಪ್ರೋತ್ಸಾಹಧನವನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಮಹಾಬಲೇಶ್ವರ ನಾಯ್ಕ ಹಾಗೂ ಪಿ.ಎಂ.ಸo.ಪಪೂ ಕಾಲೇಜಿನ ಪ್ರಾಚಾರ್ಯ ಫಾಲ್ಗುಣ ಸಿ.ಗೌಡ ಉಪಸ್ಥಿತರಿದ್ದರು. ವಿನಾಯಕ ಜಿ.ಹೆಗಡೆ ಆನ್‌ಲೈನ್ ತರಗತಿಯ ಮಹತ್ವವನ್ನು ಒತ್ತಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿಲೀಪ ಆರ್.ನಾಯ್ಕ ಸಮಾಜಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷ ವಹಿಸಿಕೊಂಡಿದ್ದರು.
ಕಾರ್ಯಕ್ರಮವನ್ನು ಶಂಕರ ಪಟಗಾರ ನಿರ್ವಹಿಸಿದರು. ಸುಬ್ರಾಯ ನಾಯಕ ಸ್ವಾಗತಿಸಿದರು. ಶ್ರೀನಿವಾಸ ಯು.ಕೆರವರು ವಂದಿಸಿದರು. ನಿವೃತ್ತರ ಪರವಾಗಿ ಅರುಣ ಹೆಗಡೆ, ನಾಗವೇಣಿ ನಾಯ್ಕ ಮಾತನಾಡಿದರು. ಈ ಸಂದರ್ಭದಲ್ಲಿ ವಿ.ಪಿ.ನಾಯ್ಕ, ಮಮತಾ ನಾಯಕ, ಸುವರ್ಣರೇಖಾ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top