ಶಿರಸಿ: ಬೆಳಗಾಂವ ಚಳಿಗಾಲದ ವಿಧಾನ ಸಭೆ ಅಧಿವೇಶನದಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿ ಪರಿಹಾರ ನಿರ್ಣಯ ತೆಗೆದುಕೊಳ್ಳದೇ ಇರುವುದು ಹಾಗೂ ಅಸಮರ್ಪಕ ಜಿಪಿಎಸ್ ಆಧಾರ ಒಕ್ಕಲೆಬ್ಬಿಸುವ ಕುರಿತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಬರೆದ ಪತ್ರಕ್ಕೆ ಉತ್ತರ ಬಾರದ ಹಿನ್ನೆಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಡಿ.30 ರಂದು ಮುಂಜಾನೆ 10 ಗಂಟೆಗೆ ಶಿರಸಿಯ ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ತುರ್ತು ಸಭೆ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.17 ರಂದು ಶಿರಸಿಯಲ್ಲಿ ಅರಣ್ಯವಾಸಿಗಳನ್ನ ಉಳಿಸಿ ರಾಜ್ಯಮಟ್ಟದ ಸಮಾವೇಶಗಳನ್ನ ಸಂಘಟಿಸಿ, ಬೆಳಗಾಂವ ಚಳಿಗಾಲದ ಅಧಿವೇಶನದಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರಣ್ಯವಾಸಿಗಳ ಪರವಾಗಿ ತಿದ್ದುಪಡಿ ಪ್ರಮಾಣ ಪತ್ರವನ್ನ ನಿರ್ಣಯಿಸಲು ಒತ್ತಾಯಿಸಲಾಗಿತ್ತು. ಆದರೆ, ಅಧಿವೇಶನದಲ್ಲಿ ಈ ಕುರಿತು ನಿರ್ಣಯಿಸದೇ ಇರುವುದರಿಂದ ಹಾಗೂ ಡಿ.21ರಂದು ಶಿರಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಹೋರಾಟಗಾರರ ವೇದಿಕೆಯ ನಿಯೋಗವು ಭೇಟಿಯಾಗಿ, ಮನವಿ ನೀಡಿ ಅಸಮರ್ಪಕ ಜಿಪಿಎಸ್ ಆಧಾರದ ಮೇಲೆ ಒಕ್ಕಲೆಬ್ಬಿಸುವ, ಅಗಳ ಹೊಡೆಯುವ ಪ್ರಕ್ರಿಯೆ ಸ್ಥಗಿತಗೊಳಿಸುವ ಕುರಿತು ನಿರ್ದೇಶನ ಪ್ರಕಟಿಸಲು ಕೋರಲಾಗಿದ್ದರೂ ಸಹಿತ ಅರಣ್ಯ ಸಂರಕ್ಷಣಾಧಿಕಾರಿ ಸ್ಪಂದಿಸದಿರುವ ಕುರಿತು ತುರ್ತು ಸಭೆಯಲ್ಲಿ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆಯನ್ನು ನಿರ್ಧರಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅರಣ್ಯ ಅತಿಕ್ರಮಣದಾರರು ಸಭೆಗೆ ಹಾಜರಿದ್ದು ಮುಂದಿನ ಹೋರಾಟಕ್ಕೆ ಸಲಹೆ ಸೂಚನೆ ನೀಡಲು ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.