Slide
Slide
Slide
previous arrow
next arrow

ಬುಡಕಟ್ಟು ಸಿದ್ದಿ ಸಮುದಾಯದವರಿಂದ ಮುಖ್ಯಮಂತ್ರಿ ಭೇಟಿ: ಮೂಲಭೂತ ಸೌಕರ್ಯಕ್ಕಾಗಿ ಮನವಿ

300x250 AD

ಯಲ್ಲಾಪುರ: ಬುಡಕಟ್ಟು ಸಿದ್ಧಿ ಸಮುದಾಯದವರ ವಿವಿಧ ಬೇಡಿಕೆಗಳ ಕುರಿತು ಬುಧವಾರ ಸುವರ್ಣಸೌಧದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಸಚಿವ ಶಿವರಾಮ ಹೆಬ್ಬಾರ್ ಅವರು ಬುಡಕಟ್ಟು ಸಿದ್ದಿ ಸಮುದಾಯದವರು ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ದಟ್ಟ ಅರಣ್ಯದಲ್ಲಿ ವಾಸವಾಗಿದ್ದು ಸರಕಾರದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಈ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮವನ್ನು ಹಾಗೂ ಸಮುದಾಯದ ಬಹುಮುಖ್ಯ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿದ್ಧಿ ಸಮುದಾಯದ ಪ್ರಮುಖರಾದ ರಾಮನಾಥ ಸಿದ್ಧಿ, ಸಾವೇರ್ ಸಿದ್ಧಿ, ಇಬ್ರಾಹಿಂ ಗುಂಜಾವತಿ, ವನಶ್ರೀ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ ಹಳಿಯಾಳದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top