ಕಾರವಾರ: ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ, ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ (ಪ್ರೇರಣಾ) ಕ್ರೆಡಿಟ್ ಯೋಜನೆ (ನೊಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ ಹಾಗೂ ಭೂ ಒಡೆತನ ಯೋಜನೆ ಕಾರ್ಯಕ್ರಮಗಳಡಿ 18 ರಿಂದ 60 ವರ್ಷದೊಳಗಿನ ಆಸಕ್ತರು ಸೆ.2 ರ ಒಳಗೆ ನಿಗಮದ ವ್ಯಾಪ್ತಿಯಲ್ಲಿ ಬರುವ www.adcl.karnataka.gov.in ಟಿನಲ್ಲಿ ಅರ್ಜಿ ಸಲ್ಲಿಸಬಹುದು.
ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೂ ಸಹಾ ಮಾಹಿತಿ ಪಡೆದು ಅರ್ಜಿಗಳನ್ನು ಸಲ್ಲಿಸಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಹಳೆ ಜಿಲ್ಲಾ ಪಂಚಾಯತ್ ಕಟ್ಟಡ, ನೆಲಮಹಡಿ, ತಹಶೀಲ್ದಾರ ಕಚೇರಿ ಹಿಂಭಾಗ ದೂರವಾಣಿ ಸಂಖ್ಯೆ: 08382-226903 ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕಿ ವಿಮಲಾ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.