Slide
Slide
Slide
previous arrow
next arrow

ಶಾರ್ಟ್ ಸರ್ಕೀಟ್‌ನಿಂದ ಬೆಂಕಿ; ನಾಲ್ಕು ಎಕರೆ ಕಬ್ಬಿನ ಗದ್ದೆಗೆ ಹಾನಿ

300x250 AD

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಕಬ್ಬಿನ ಗದ್ದೆಯೊಂದರಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ತಗುಲಿ ನಾಲ್ಕು ಎಕರೆಯಷ್ಟು ಕಬ್ಬು ಸುಟ್ಟಿವೆ.
ಹನುಮವ್ವ ಹರಿಜನ ಎಂಬುವರ ಕಬ್ಬಿನ ಗದ್ದೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆಮಾಡಿ ತಿಳಿಸಿದ್ದು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪ್ರಭಾರ ಅಗ್ನಿಶಾಮಕ ಠಾಣಾಧಿಕಾರಿ ಎಸ್.ಮಂಜಣ್ಣ, ಸಿಬ್ಬಂದಿ ಬಸವರಾಜ ನಾನಾಪೂರ, ಸೋಮಶೇಖರ ಜೀವಣ್ಣನವರ್, ಚಮನಸಾಬ್ ನದಾಫ್, ದಾದಾಪೀರ ಕೊರಗ್ಗೆರಿ ಹಾಗೂ ಮಾರುತಿ ಭಜಂತ್ರಿ ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top