Slide
Slide
Slide
previous arrow
next arrow

ಜ.2ರಿಂದ ಎಸಿ, ಫ್ರಿಡ್ಜ್ ರಿಪೇರಿ ತರಬೇತಿ

300x250 AD

ಕುಮಟಾ: ಏರ್ ಕಂಡೀಶನರ್ ಮತ್ತು ರೆಫ್ರಿಜರೇಟರ್ ರಿಪೇರಿ ತರಬೇತಿ (ಎಲ್ಲಾ ಕಂಪನಿಯ ಎಸಿ ಮತ್ತು ರೆಫ್ರಿಜರೇಟರ್) ಜ.02ರಿಂದ 31ರವರೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18ರಿಂದ 45 ವರ್ಷಗಳು ಹಾಗೂ ಕನಿಷ್ಟ ವಿದ್ಯಾರ್ಹತೆ ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಈ ತರಬೇತಿಯ ಜೋತೆಗೆ ವ್ಯಕ್ತಿತ್ವ ವಿಕಸನ, ಬ್ಯಾಂಕಿoಗ್, ಮಾರ್ಕೇಟಿಂಗ್ ಹೀಗೆ ಮುಂತಾದ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ- 581343 ಉತ್ತರ ಕನ್ನಡ ಜಿಲ್ಲೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಮೊಬೈಲ್ ಸಂಖ್ಯೆ 9449860007, 9538281989, 9916783825, 8880444612, 9620962004 ಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ, ಆಧಾರ ಕಾರ್ಡ, ಬ್ಯಾಂಕ್ ಪಾಸ್‌ಬುಕ್, ಪಾನ್ ಕಾರ್ಡ್ ಇವುಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬೇಕೆಂದು ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top