Slide
Slide
Slide
previous arrow
next arrow

ಜ.29ಕ್ಕೆ ನಂದೊಳ್ಳಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ

300x250 AD

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ 2023ರ ಜ.29 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ನರಸಿಂಹ ಕೋಣೆಮನೆ ಹೇಳಿದರು.
ಅವರು ಶಾಲೆಯ ಆವಾರದಲ್ಲಿ ನಡೆದ ಶತಮಾನೋತ್ಸವ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಬೆಳಗ್ಗೆ 10 ಕ್ಕೆ ಸನ್ಮಾನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಉದ್ಘಾಟಿಸುವರು. ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಂಜೆ 4ಕ್ಕೆ ಸ್ವರ್ಣವಲ್ಲಿಯ ಪೂಜ್ಯ ಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶತಮಾನೋತ್ಸವವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ ಇತರ ಗಣ್ಯರು ಭಾಗವಹಿಸಲಿದ್ದಾರೆ. ಪತ್ರಕರ್ತ ಹರಿಪ್ರಕಾಶ ಕೋಣೆಮನೆ ಆಶಯ ನುಡಿ ಆಡಲಿದ್ದಾರೆ. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.
ಎಸ್.ಡಿ.ಎo.ಸಿ ಅಧ್ಯಕ್ಷ ವಿನಾಯಕ ಭಟ್ಟ, ಮಾಜಿ ಅಧ್ಯಕ್ಷ ಎಂ.ಎನ್.ಭಟ್ಟ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಭಟ್ಟ ಕಲಗಂಡ, ನಾಗೇಂದ್ರ ಭಟ್ಟ, ವಿದ್ಯಾರ್ಥಿ ಪ್ರತಿನಿಧಿ ಸಿಂಚನಾ ಗೌಡ, ಮುಖ್ಯಾಧ್ಯಾಪಕ ಭಾಸ್ಕರ ನಾಯ್ಕ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top