Slide
Slide
Slide
previous arrow
next arrow

ಜ. 5ಕ್ಕೆ ವಿದ್ಯಾರ್ಥಿಗಳು- ಶಿಕ್ಷಕರ ಶೈಕ್ಷಣಿಕ ಸಮ್ಮೇಳನ

300x250 AD

ಶಿರಸಿ: ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪಠ್ಯೇತರ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಅವರಿಗೆ ಪ್ರತ್ಯೇಕವಾಗಿ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕಾ ಶೈಕ್ಷಣಿಕ ಸಮ್ಮೇಳನ (2022- 23)ವನ್ನು ಜ.5ರಂದು ಬೆಳಿಗ್ಗೆ 9.30ರಿಂದ ಶ್ರೀಮಾರಿಕಾಂಬಾ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಸಮ್ಮೇಳನವು ತಾಲೂಕಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಗಳ ಸಹಭಾಗಿತ್ವದಲ್ಲಿ ನಡೆಯಲಿದೆ. ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು ಪಠ್ಯ ಚಟುವಟಿಕೆ ಹೊರತಾಗಿ ವಿಜ್ಞಾನ ವಸ್ತುಪ್ರದರ್ಶನ, ಕ್ರೀಡೆ, ನಾಟಕ ಪ್ರದರ್ಶನ, ವಿಜ್ಞಾನಗೋಷ್ಠಿ ಹೀಗೆ ನಾನಾ ಪ್ರದರ್ಶನಗಳನ್ನು ಮಾಡಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳನ್ನು ಬಾಚುವ ಮೂಲಕ ನಮ್ಮೂರಿನ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರುವಂತೆ ಮಾಡಿದ್ದಾರೆ. ಆದರೆ ಅವರ ಸಾಧನೆ ಕೆಲವೇ ಜನರಿಗೆ, ಅವರ ಪಾಲಕರಿಗಷ್ಟೇ ಗೊತ್ತು, ಬಿಟ್ಟರೆ ಉಳಿದವರಿಗೆ ಗೊತ್ತಿಲ್ಲ. ಅವರ ಸಾಧನೆಯನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ದೃಷ್ಟಿಯಿಂದ ಶೈಕ್ಷಣಿಕ ಸಮ್ಮೇಳನ ಮಾಡುತ್ತಿರುವುದಾಗಿ ತಿಳಿಸಿದರು.
ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಪಟಗಾರ ಮಾತನಾಡಿ, ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಾಡಿದ ಸಾಧನೆಯನ್ನು ಪರಿಚಯಿಸಲು ಅವರಿಂದಲೇ ವಸ್ತು ಮತ್ತು ವಿಜ್ಞಾನ ಪ್ರದರ್ಶನ ಮಾಡಿಸಲಾಗುವುದು. ಶೈಕ್ಷಣಿಕ ಸಮ್ಮೇಳನವು ಬೆಳಿಗ್ಗೆ ಪ್ರಾರಂಭವಾಗಿ ಒಂದು ದಿನ ನಡೆಯಲಿದೆ. ಅಂದು ಮಧ್ಯಾಹ್ನ 4.30ರಿಂದ ಶಿಕ್ಷಕ ವೃಂದದವರಿoದ ಸಾಮೂಹಿಕ ನೃತ್ಯ, ಕೋಲಾಟ, ಗೀಗೀ ಪದ, ಕೀಲು ಗೊಂಬೆಯಾಟ, ಜಾನಪದ ನೃತ್ಯ, ಸಮೂಹ ಗಾಯನ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಶೈಕ್ಷಣಿಕ ಗೋಷ್ಠಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ, ಕವಿಗೋಷ್ಠಿ, ಶೈಕ್ಷಣಿಕ ವಿಚಾರಗೋಷ್ಠಿ ನಡೆಯಲಿದೆ ಎಂದರು.
ಉದ್ಘಾಟನೆ: ಶೈಕ್ಷಣಿಕ ಸಮ್ಮೇಳನದ ಅಧ್ಯಕ್ಷತೆಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೆರವೇರಿಸಲಿದ್ದು, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಸಮ್ಮೇಳನದ ಪಾಠೋಪಕರಣಗಳ ಮಳಿಗೆ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ ನೆರವೇರಿಸಲಿದ್ದು, ಶೈಕ್ಷಣಿಕ ಸಮ್ಮೇಳನದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಸಂಸದ ಅನಂತಕುಮಾರ ಹೆಗಡೆ ಮುಂತಾದವರು ಉಪಸ್ಥಿತರಿರುವರು.
ಸುದ್ದಿಗೋಷ್ಠಿಯಲ್ಲಿ ಬಿಆರ್‌ಸಿ ಸಮನ್ವಯಾಧಿಕಾರಿ ದಿನೇಶ ಶೇಟ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಜಿ.ಹೆಗಡೆ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ನಾರಾಯಣ ದಾಯಿಮನೆ, ತಾಲೂಕಾ ಅಧ್ಯಕ್ಷ ಜಿ.ಯು.ಹೆಗಡೆ, ಹರಿಶ್ಚಂದ್ರ ನಾಯ್ಕ, ಧರ್ಮಾನಂದ ಭಟ್ಟ ಮುಂತಾದವರು ಇದ್ದರು.

300x250 AD
Share This
300x250 AD
300x250 AD
300x250 AD
Back to top