ಕಾರವಾರ: ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಪ್ರಾಬಲ್ಯ ಸಾಧಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಅದರಂತೆ ಗ್ರಾಮೀಣ ಭಾಗದ ಮಹಿಳೆಯರು ಕೂಡ ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳಲು ಹೆಚ್ಚಿನ ಆಸಕ್ತಿ ತೋರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನೀರ್ದೇಶಕಿ ಶ್ಯಾಮಲಾ ಸಿ.ಕೆ. ಹೇಳಿದರು.
ತಾಲ್ಲೂಕಿನ ಅಮದಳ್ಳಿಯ ಶ್ರೀವೀರ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಕೀಲರಾದ ವರದಾ ನಾಯ್ಕ ಮಾತನಾಡಿ, ಮಹಿಳೆಯರು ಚಿಕ್ಕ ಮಕ್ಕಳ ಮೇಲೆ ಲೈಗಿಂಕ ದೌರ್ಜನ್ಯ ಕಿರುಕುಳಗಳು ನಡೆಯುತ್ತವೆ. ಸಮಾಜದಲ್ಲಿ ಸಂಭವಿಸುತ್ತಿರುವ ಇಂತಹ ಅಹಿತಕರ ಘಟನೆಗಳ ಬಗ್ಗೆ ದೂರು ದಾಖಲಿಸಬೇಕು ಎಂದು ಮಾಹಿತಿ ನೀಡಿದ ಅವರು ಪೊಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.
ಕಸಾಪ ಕಾರ್ಯದರ್ಶಿ ಗಣೇಶ ಬಿಷ್ಟಣ್ಣನವರ ಕುಟುಂಬದ ಆರ್ಥಿಕ ಭದ್ರತೆಯಲ್ಲಿ ಮಹಿಳೆಯರ ಪಾತ್ರ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷೆ ಆಶಾ ನಾಯ್ಕ ವಹಿಸಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಜಿಲ್ಲಾ ನೀರ್ದೇಶಕ ಮಹೇಶ ಎಮ್.ಡಿ ಹಾಗೂ ವೀರ ಗಣಪತಿ ದೇವಸ್ಥಾನ ಸದಸ್ಯ ಸುಭಾಷ್ ನಾಯ್ಕ ಉಪಸ್ಥಿತರಿದ್ದರು.
ಯೋಜನಾಧಿಕಾರಿಗಳಾದ ವಿನಾಯಕ ನಾಯ್ಕ ಪ್ರಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಆರ್ಥಿಕ ಸಹಾಯ ಮತ್ತು ಗಾಲಿ ಕುರ್ಚಿಗಳನ್ನು ವಿತರಿಸಲಾಯಿತು. ಪ್ರಾರ್ಥನೆಯೊಂದಿಗೆ ಆರಂಭಗೊOಡ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುಜಾತಾ ನಾಯ್ಕ ಸ್ವಾಗತಿಸಿ ನಿರೂಪಿಸಿದರು.