ಮುಂಡಗೋಡ: ಪ್ರತಿ ವ್ಯಕ್ತಿ ಬದುಕಿಗೆ ಒಂದು ಸೂರು ಇರಬೇಕು. ಕುಡಿಯಲು ನೀರು ಇರಬೇಕು ಎಂಬುದೇ ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ವಿವೇಕಾನಂದ ಬಯಲು ರಂಗಮoದಿರದಲ್ಲಿ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಪಟ್ಟಣ ಪಂಚಾಯತ ಆಶ್ರಯದಲ್ಲಿ ಡಾ.ಅಂಬೇಡ್ಕರ್ ಓಣಿ, ಲಮಾಣಿ ತಾಂಡಾ ಹಾಗೂ ಕಂಬಾರಗಟ್ಟಿಯ 235 ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.
ತಾಲೂಕಿನ ರಸ್ತೆ ಹಾಗೂ ಗಲ್ಲಿಗಳಲ್ಲಿರುವ ಸಿಮೆಂಟ್ ಚರಂಡಿಗಳು ಯಾವ ರೀತಿ ಅಭಿವೃದ್ಧಿಯಾಗಿದೆ, ಕಳೆದ ಹತ್ತು ವರ್ಷದ ಹಿಂದೆ ಹೇಗಿತ್ತು ಎಂದು ನೆನಪು ಮಾಡಿಕೊಳ್ಳಿ ಎಂದು ಹೇಳಿದರು. ತಾವು ನನಗೆ ನೀಡಿದ ಆಶೀರ್ವಾದದಿಂದ ನಿಮ್ಮ ಋಣವನ್ನು ತೀರಿಸುವ ಒಂದು ಅವಕಾಶ ನನ್ನದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕಾ ಮಂಡಳ ಅಧ್ಯಕ್ಷ ನಾಗಭೂಷಣ ಹಾವಣಗಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಜಯಸುಧಾ ಭೋವಿವಡ್ಡರ, ಉಪಾಧ್ಯಕ್ಷ ಶ್ರೀಕಾಂತ ಸಾನು, ಎಲ್.ಟಿ.ಪಾಟೀಲ್, ಅಶೋಕ ಚಲವಾದಿ, ಗುಡ್ಡಪ್ಪ ಕಾತೂರ, ಉಮೇಶ ಬಿಜಾಪುರ, ಶೇಖರ ಲಮಾಣಿ, ಪ.ಪಂ ಸದಸ್ಯರು, ಮುಖಂಡರು ಇದ್ದರು.
ಯಲ್ಲಾಪುರದಲ್ಲೂ ಕೊಳಗೇರಿ ನಿವಾಸಿಗಳಿಗೆ ಜ.4ಕ್ಕೆ ಹಕ್ಕು ಪತ್ರ ವಿತರಣೆ
ವಸತಿ ಇಲಾಖೆ, ಪೌರಾಡಳಿತ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ಪಟ್ಟಣ ವ್ಯಾಪ್ತಿಯ ಮಂಜುನಾಥನಗರ, ಗಣಪತಿಗಲ್ಲಿ, ನೂತನ ನಗರ (ಜಡ್ಡಿ) ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಬುಧವಾರ (ಜ.4) ಸಂಜೆ 4 ಗಂಟೆಗೆ ಹೆಬ್ಬಾರ್ ನಗರದಲ್ಲಿ ನಡೆಯಲಿದೆ.
ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಉಪಸ್ಥಿತಿಯಲ್ಲಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುನಂದ ದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೋರಾಡಳಿತ ಸಚಿವ ಎಂಟಿಬಿ ನಾಗರಾಜ್, ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಗೌರವ ಉಪಸ್ಥಿತರಿರಲಿದ್ದಾರೆ.
ಸಂಸದ ಅನಂತಕುಮಾರ್ ಹೆಗಡೆ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಬಿ.ಸಂಕನೂರು, ಶಾಂತಾರಾಮ ಸಿದ್ದಿ, ಗಣಪತಿ ಉಳ್ಬೇಕರ್, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಜಿಎಲ್.ಹೆಗಡೆ, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ, ಕರಾವಿ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪ.ಪಂ ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕು. ಸ್ಟೆಲ್ಲಾ ವರ್ಗೀಸ್, ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಂಗನಬಸಯ್ಯ, ಪಟ್ಟಣ ಪಂಚಾಯಿತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
235 ಮಂದಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿದ ಸಚಿವ ಹೆಬ್ಬಾರ
