Slide
Slide
Slide
previous arrow
next arrow

ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ: ಸಂಸದ ಅನಂತಕುಮಾರ ಹೆಗಡೆ ಸಂತಾಪ

300x250 AD

ಶಿರಸಿ: ನಡೆದಾಡುವ ದೇವರು, ಆಧ್ಯಾತ್ಮಿಕ ಚಿಂತಕರಾದ ಕೋಟ್ಯಾಂತರ ಭಕ್ತರ ಆರಾಧ್ಯ ದೈವರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಸುದ್ದಿ ತಿಳಿದು ತುಂಬಾ ದುಃಖವಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಸಂತಾಪ ಸೂಚಿಸಿದ್ದಾರೆ.
ಸರಳ ಸ್ವಭಾವದ ಅಪರೂಪದ ಸಂತ ನಮ್ಮನ್ನಗಲಿದ್ದಾರೆ. ಸಮಾಜದ ಒಳಿತಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡ ಮಹಾನ್ ತಪಸ್ವಿಯಾಗಿದ್ದರು. ಉಪನಿಷತ್ತು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಸರಳ ಸಾಮಾನ್ಯರಂತೆ ಬದುಕಿ ಇತರರಿಗೆ ಆದರ್ಶವಾಗಿದ್ದರು. ಪರಮ ಪೂಜ್ಯರ ಆತ್ಮಕ್ಕೆ ಸದ್ಗತಿಯನ್ನೂ ಹಾಗೂ ಅವರ ಭಕ್ತಾಧಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top