ಕಾರವಾರ: ನಾವು ಕಾರ್ಯವನ್ನು ಸಂತೋಷದಿoದ ಮನಸ್ಸಿನಿಂದ ಮಾಡಬೇಕು. ನಮ್ಮ ಪ್ರತಿಭೆ, ಸಾಮರ್ಥ್ಯವನ್ನು ನಾವೇ ಗುರುತಿಸಿಕೊಂಡು ಗುರಿ ತಲುಪಬೇಕು ಎಂದು ಚಾರ್ಟರ್ಡ್ ಅಕೌಂಟೆoಟ್ ಹಾಗೂ ಹಿಂದೂ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿಯೂ ಆಗಿರುವ ಸಂಜಯ ಎಸ್.ಶಾನಭಾಗ ಹೇಳಿದರು.
ಅವರು ಹಿಂದೂ ಪ್ರೌಢಶಾಲೆಯ 125ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ‘ಕರಿಯರ್ಸ್& ಯು’ ವಿಚಾರಗೋಷ್ಠಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಾರವಾರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಅನಿರುದ್ಧ ಹಳದಿಪುರಕರ ಮಾತನಾಡಿ, ಇದು ‘ಕರಿಯರ್ಸ್& ಯು’ ಸರಣಿ ಉಪನ್ಯಾಸದ ಅಂತಿಮ ಕಾರ್ಯಕ್ರಮವಾಗಿದೆ. ಒಟ್ಟಿಗೆ 13 ಮಾಜಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.
ಹಿoದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅರುಣ ರಾಣೆ ಸ್ವಾಗತ ಕೋರಿದರು. ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ವಂದನಾರ್ಪಣೆ ಸಲ್ಲಿಸಿದರು. ಸುಮತಿ ದಾಮ್ಲೆ ಪ್ರೌಢಶಾಲೆಯ ಶಿಕ್ಷಕ ಸಂತೋಷ ಎಂ.ಶೇಟ್ ಕಾರ್ಯಕ್ರಮ ನಿರ್ವಹಿಸಿದರು.
ಈ ಕಾರ್ಯಕ್ರಮದಲ್ಲಿ ಸುಮತಿ ದಾಮ್ಲೆ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಗಿರಿಜಾ ಎನ್.ಬಂಟ ಹಾಗೂ ಮೂರೂ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದರು.