ಸಿದ್ದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆಯುಕ್ತರ ಕಾರ್ಯಾಲಯ ಬೆಂಗಳೂರು ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಶೈಕ್ಷಣಿಕ ಜಿಲ್ಲೆ ಶಿರಸಿ ಇವರು ಏರ್ಪಡಿಸಿದ್ದ 2022-23 ನೇ ಸಾಲಿನ ಸಿರ್ಸಿ ಶೈಕ್ಷಣಿಕ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಾಲೂಕಿನ ಕಿಬ್ಬಳ್ಳಿಯ ಶ್ರೀ ಮಹಾಗಣಪತಿ ಪ್ರೌಢಶಾಲೆಯಾ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆಗೈದಿದ್ದಾರೆ.
10ನೇ ತರಗತಿಯ ವಿದ್ಯಾರ್ಥಿ ಈಶ್ವರ ಹನುಮಂತ ಗೌಡ ಹಾಗೂ ತರುಣ್ ಭದ್ರ ಗೌಡ ಇವರುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .ಇವರಿಗೆ ವಿಜ್ಞಾನ ಶಿಕ್ಷಕಿ ಶ್ರೀಮತಿ ಅನಿತಾ ಸಿರ್ಸಿಕರ್ ಮಾರ್ಗದರ್ಶನ ಮಾಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕರುಗಳು, ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ: ಕಿಬ್ಬಳ್ಳಿ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ
