ಕಾರವಾರ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2022- 23ನೇ ಸಾಲಿನ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಪಡೆಯಲು ಪ್ರಿ- ಮ್ಯಾಟ್ರಿಕ್ ಮತ್ತು ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳು http://ssp.postmetric.karnataka.gov.in ಮತ್ತು http://ssp.premetric.karnataka.gov.in ನ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ಜ.15ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382200758 ಗೆ ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.