Slide
Slide
Slide
previous arrow
next arrow

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ: ಕಿಬ್ಬಳ್ಳಿ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರಥಮ

300x250 AD

ಸಿದ್ದಾಪುರ: ಧಾರವಾಡದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆಯುಕ್ತರ ಕಾರ್ಯಾಲಯ ಬೆಂಗಳೂರುರವರು ಏರ್ಪಡಿಸಿದ್ದ 2022-23 ನೇ ಸಾಲಿನ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಾಲೂಕಿನ ಕಿಬ್ಬಳ್ಳಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.

ಶ್ರೀ ಮಹಾಗಣಪತಿ ಪ್ರೌಢಶಾಲೆ ಕಿಬ್ಬಳ್ಳಿಯ 10ನೇ ತರಗತಿಯ ವಿದ್ಯಾರ್ಥಿ ಈಶ್ವರ ಹನುಮಂತ ಗೌಡ ಹಾಗೂ 8ನೇ ತರಗತಿ ತರುಣ್ ಭದ್ರ ಗೌಡ ಇವರುಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಶಾಲಾ ಕೀರ್ತಿ ಹೆಚ್ಚಿಸಿದ್ದು, ಇವರಿಗೆ ವಿಜ್ಞಾನ ಶಿಕ್ಷಕಿ ಶ್ರೀಮತಿ ಅನಿತಾ ಸಿರ್ಸಿಕರ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕರುಗಳು, ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top