Slide
Slide
Slide
previous arrow
next arrow

ಮುಖ್ಯಮಂತ್ರಿ ಭೇಟಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಬೇಕು: ಕಾಗೇರಿ

300x250 AD

ಶಿರಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ.15ರಂದು ಶಿರಸಿಗೆ ಆಗಮಿಸಲಿದ್ದು, ಮುಖ್ಯಮಂತ್ರಿಗಳ ಭೇಟಿ ಜಿಲ್ಲೆಯ ಅಭಿವೃದ್ಧಿಗೆ ಕಾರಣವಾಗಬೇಕೆಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಬೊಮ್ಮಾಯಿ ಮುಖ್ಯಮಂತ್ರಿ ಆದ ಮಾರನೇ ದಿನವೇ ಜಿಲ್ಲೆಗೆ ಆಗಮಿಸಿದ್ದರು. ಜಿಲ್ಲೆಯ ಅಭಿವೃದ್ಧಿಗೆ ಹೊಸ ವೇಗ ನೀಡಿದ್ದಾರೆ. ಈಗ ಶಿರಸಿಗೇ ಆಗಮಿಸುತ್ತಿದ್ದಾರೆ. ನಮ್ಮ ಜನ ಜೀವನದಲ್ಲಿ ಇರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ಅಧಿಕಾರಿಗಳೂ ಸಹ ಸಮಸ್ಯೆ ಪಟ್ಟಿ ಮಾಡಿ ಸಿಎಂಗೆ ತಿಳಿಸುವ ಕಾರ್ಯಕ್ರಮ ಆಗಬೇಕು ಎಂದರು.
ಜ.15ರ ಬೆಳಗ್ಗೆ 250 ಕೋಟಿ ರೂ. ಕಾಮಗಾರಿಗಳಿಗೆ ಭೂಮಿಪೂಜೆ, ಉದ್ಘಾಟನೆ ಆಗಲಿದೆ. ಅವರ ಜೊತೆ ಕೇಂದ್ರ, ರಾಜ್ಯದ ವಿವಿಧ ಇಲಾಖೆಗಳ ಪ್ರತಿನಿಧಿಗಳೂ ಆಗಮಿಸಲಿದ್ದಾರೆ. ಕಾಲೇಜ್ ಗ್ರೌಂಡ್‌ನಲ್ಲಿ ಹೆಲಿಕ್ಯಾಪ್ಟರ್‌ನಲ್ಲಿ ಬಂದು ಪಿಡಬ್ಲೂಡಿ ಐಬಿಗೆ ಬರಲಿದ್ದಾರೆ. ಬಳಿಕ ಆಸ್ಪತ್ರೆಗೆ ತೆರಳಿ ಎಲ್ಲ ಕಾಮಗಾರಿಗಳ ಪೂಜೆ ನಡೆಯಲಿದೆ. 10 ಕೋಟಿ ರೂ. ಆಡಳಿತ ಸೌಧ, ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಮತ್ತು ಕೇಂದ್ರಕ್ಕೆ ಸಂಬAಧಿಸಿದ ಪೆಂಡಿAಗ್ ವಿಷಯಗಳನ್ನು ಗಮನಕ್ಕೆ ತರಬೇಕು. ಅಲ್ಲಿಂದ ಅಭಿನಂದನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳು ಅಲರ್ಟ್ ಇರಬೇಕು. ಪಾರ್ಕಿಂಗ್ ವ್ಯವಸ್ಥೆ ಸರಿ ನಿರ್ವಹಣೆ ಆಗಬೇಕು ಎಂದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಮುಖ್ಯಮಂತ್ರಿಗಳ ಭೇಟಿಗೆ ಯಾವುದೇ ರೀತಿಯ ಕುಂದು ಕೊರತೆ ಇಲ್ಲದಂತೆ ಜಿಲ್ಲಾಡಳಿತ ನೋಡಿಕೊಳ್ಳುವದಾಗಿ ಸ್ಪೀಕರವರಿಗೆ ಭರವಸೆ ನೀಡಿದರು. ರಸ್ತೆ, ಪಾರ್ಕಿಂಗ್, ವೇದಿಕೆ, ನಗರ ಸೌದರ್ಯೀಕರಣ, ಬಂದೋಬಸ್ತ್, ರಕ್ಷಣೆ, ಸಚಿವರನ್ನು ಬರಮಾಡಿಕೊಳ್ಳುವಿಕೆಯಲ್ಲಿ ಹೆಚ್ಚಿನ ಗಮನ ಹರಿಸುವದಾಗಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪವಿಭಾಗಾಧಿಕಾರಿ ದೇವರಾಜ ಆರ್., ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ತಹಶೀಲ್ದಾರ ಶ್ರೀಧರ ಮುಂದಲಮನಿ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top