Slide
Slide
Slide
previous arrow
next arrow

ಜ.15ಕ್ಕೆ ಶಿರಸಿಗೆ ಸಿಎಂ: ಅರಣ್ಯ ಅತಿಕ್ರಮಣದಾರರಿಂದ ಮನವಿ ನೀಡಲು ತೀರ್ಮಾನ

300x250 AD

ಶಿರಸಿ: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶಿರಸಿಗೆ ಜನವರಿ ೧೫ ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಮನವರಿಕೆ ಮಾಡುವ ಹಿನ್ನೆಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಮನವಿ ಮತ್ತು ಸಮಸ್ಯೆಗಳನ್ನ ವಿಶ್ಲೇಷಣೆ ಮಾಡಲು ತೀರ್ಮಾನಿಸಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಿದೆ.

 ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಅರಣ್ಯ ಹೋರಾಟಗಾರರ ನಿಯೋಗವು ಶಿರಸಿ ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರಿಗೆ ಮುಖ್ಯಮಂತ್ರಿಗೆ ಭೇಟ್ಟಿಗೆ ಅವಕಾಶ ಕೋರಿ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರ ನೀಡಿ ಮೇಲಿನಂತೆ ಹೇಳಿದರು.

 ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಕುರಿತು ಸರ್ವೋಚ್ಚ ನ್ಯಾಯಾಲಯ ನ್ಯೂ ಡೆಲ್ಲಿಯಲ್ಲಿ ಅಂತಿಮ ವಿಚಾರಣೆ ಹಂತದಲ್ಲಿ ಇರುವುದರಿಂದ ಅರಣ್ಯ ಸಿಬ್ಬಂದಿಗಳಿಂದ ಕಾನೂನು ಬಾಹಿರವಾಗಿ, ಕಾನೂನಿಗೆ ವ್ಯತಿರಿಕ್ತವಾಗಿ ಹಿಂಸೆ ನೀಡುತ್ತಿರುವುದು ಹಾಗೂ ಅಸಮರ್ಪಕ ಜಿಪಿಎಸ್ ಮಾನದಂಡದಡಿಯಲ್ಲಿ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಹಾಗೂ ಗಂಭೀರ ಸ್ವರೂಪದ ಸಮಸ್ಯೆಗಳನ್ನ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದೆಂದು ಅವರು ಹೇಳಿದರು.

300x250 AD

 ನಿಯೋಗದಲ್ಲಿ ಲಕ್ಷ್ಮಣ ಮಾಳ್ಳಕ್ಕನವರ, ಇಬ್ರಾಹಿಂ ಗೌಡಳ್ಳಿ, ಮೀರಸಾಬ ಅಬ್ದುಲ್ ಗಫಾರ್, ಗಣಪತಿ ರಾಮಾ ಮರಾಠಿ, ಮಹಮ್ಮದ್ ಸಾಬ ಶೇಖ್ ದಾದಾಸಾಬ ಉಪಸ್ಥಿತರಿದ್ದರು.

ಸಮಸ್ಯೆ ಬಗೆಹರಿಸುವಲ್ಲಿ ವಿಫಲ:
 ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಗಂಭೀರ ಸ್ವರೂಪದ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದು ಅನಿವಾರ್ಯವಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

Share This
300x250 AD
300x250 AD
300x250 AD
Back to top