Slide
Slide
Slide
previous arrow
next arrow

ಹಿರೇಗುತ್ತಿ ಹೈಸ್ಕೂಲಿನಲ್ಲಿ ಸವಿ ಫೌಂಡೇಶನ್‌ನಿಂದ ಯೋಗ ಪ್ರಾತ್ಯಕ್ಷಿಕೆ

300x250 AD

ಕುಮಟಾ: ಯೋಗ ಎನ್ನುವುದು ಮನಸ್ಸನ್ನು ಶಾಂತಗೊಳಿಸಿ ವರ್ತಮಾನದಲ್ಲಿ ದೇಹ ಹಾಗೂ ಮನಸ್ಸನ್ನು ಏಕಾಗೃತೆಗೊಳಿಸುವ ಕ್ರಿಯೆಯಾಗಿದೆ ಎಂದು ಸವಿ ಫೌಂಡೇಶನ್ ಅಧ್ಯಕ್ಷ ಹಾಗೂ ಶ್ರೀಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜ್ ಸಿವಿಲ್ ವಿಭಾಗದ ಮುಖ್ಯಸ್ಥ ಸಂದೀಪ ನಾಯಕ ನುಡಿದರು.
ಅವರು ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲ್ ಹಾಗೂ ಸವಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಯೋಗ ಪಟು ಚಂದನ್‌ರವರ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾನಸಿಕ ಸ್ಥಿಮಿತವಿಲ್ಲದ ಮನುಷ್ಯ ಹಲವಾರು ಒತ್ತಡಗಳಿಗೆ ಸಿಲುಕಿ ವಿವಿಧ ರೀತಿಯ ರೋಗಗಳಿಗೆ ಬಲಿಯಾಗುತ್ತಿದ್ದಾನೆ, ಸರಿಯಿಲ್ಲದ ಜೀವನಶೈಲಿ, ಸ್ಥಿಮಿತವಿಲ್ಲದ ಮನಸ್ಸು ಇದಕ್ಕೆ ಕಾರಣ ಇಂತಹ ಸಮಸ್ಯೆಗಳನ್ನು ಯೋಗಾಭ್ಯಾಸದ ಮೂಲಕವಾಗಿ ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ಹೈಸ್ಕೂಲ್ ಮುಖ್ಯಾಧ್ಯಾಪಕ ರೋಹಿದಾಸ ಎಸ್.ಗಾಂವಕರ ಮಾತನಾಡಿ, ‘ಯೋಗಃ ಚಿತ್ತ ವೃತ್ತಿ ನಿರೋಧಃ’. ಮನಸ್ಸಿನಲ್ಲಿ ಏಳುವ ಅಲೆಗಳ ನಿರೋಧವೇ ಯೋಗ ಎಂದರು. ಯೋಗ ಮನಸ್ಸಿನ ಚಂಚಲತೆ ಹೋಗಲಾಡಿಸಿ ಮನೋನಿಗ್ರಹಕ್ಕೆ ಉತ್ತಮ ಆರೋಗ್ಯಕ್ಕೆ ಸಮುದಾಯದ ಉದ್ಧಾರಕ್ಕೆ ಯೋಗ ಬಳಕೆಯಾಗಲಿ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್.ರಾಮು ಹಿರೇಗುತ್ತಿ, ಪುರಾತನ ಕಾಲದಿಂದಲೂ ಯೋಗಾಭ್ಯಾಸವನ್ನು ಭಾರತದಲ್ಲಿ ಜೀವನದ ಒಂದು ಭಾಗವಾಗಿ ಪಾಲಿಸುತ್ತಾ ಬಂದಿದ್ದಾರೆ. ಉತ್ತಮ ಆರೋಗ್ಯವನ್ನು ಅಭಿವೃದ್ಧಿ ಪಡಿಸುವಲ್ಲಿ ಯೋಗವು ಮಹತ್ವದ ಸ್ಥಾನವನ್ನು ಹೊಂದಿದೆ ಎಂದು ತಿಳಿಸಿದರು.
ಫೆಡರೇಶನ್ ಇಂಟರ್‌ನ್ಯಾಷನಲ್ ಸಿಲ್ವರ್ ಮೆಡಲ್ ಪ್ರಶಸ್ತಿ ಪಡೆದ ಚಂದನ್ ಸಾಗರರವರಿಂದ ಯೋಗಾಸನದ ಪ್ರಾತ್ಯಕ್ಷಿಕೆ ನಡೆಯಿತು. ಹಾಗೂ ಹೈಸ್ಕೂಲ್ 8ನೇ ತರಗತಿ ವಿದ್ಯಾರ್ಥಿ ರೋಹಿತ ಸಿಣ್ಣ ಅಂಬಿಗ ಸಹಕರಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಿಕ್ಷಕರಾದ ಬಾಲಚಂದ್ರ ಹೆಗಡೆಕರ್, ವಿಶ್ವನಾಥ ಬೇವಿನಕಟ್ಟಿ, ನಾಗರಾಜ ನಾಯಕ, ಮಹಾದೇವ ಗೌಡ, ಬಾಲಚಂದ್ರ ಅಡಿಗೋಣ, ಇಂದಿರಾ ನಾಯಕ ಜಾನಕಿ ಗೊಂಡ, ಶಿಲ್ಪಾ ನಾಯಕ, ಮದನ ನಾಯಕ, ಕವಿತಾ ಅಂಬಿಗ, ಗೋಪಾಲಕೃಷ್ಣ ಗುನಗಾ, ಗೋವಿಂದ ನಾಯ್ಕ ಉಪಸ್ಥಿತರಿದ್ದರು. ಕಾಂಚಿಕಾ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ವಿಜೇತ ಗುನಗಾ ವಂದಿಸಿದರು. ಈ ಅರ್ಥಪೂರ್ಣ ಯೋಗಾಸನದ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.

300x250 AD
Share This
300x250 AD
300x250 AD
300x250 AD
Back to top