Slide
Slide
Slide
previous arrow
next arrow

ರಾಜ್ಯದಲ್ಲಿ ಇನ್ನೂ 2 ದಿನ ಚಳಿ: ಹವಾಮಾನ ಇಲಾಖೆ ಎಚ್ಚರಿಕೆ

300x250 AD

ಕಾರವಾರ: ರಾಜ್ಯದಲ್ಲಿ 2 ದಿನಗಳ ಕಾಲ ಚಳಿ ಮುಂದುವರಿಯಲಿದ್ದು, ಕೆಲ ಕಡೆ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳ ಕಾಲ ಕನಿಷ್ಠ ಉಷ್ಣಾಂಶವು ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಸಾಮಾನ್ಯಕ್ಕಿಂತ 5- 6 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಶೀತ ಮಾರುತಗಳು ಬೀಸಲಿದ್ದು, ಕರಾವಳಿ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಸಾಮಾನ್ಯವಾಗಿ ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಆರಂಭವಾಗುವ ಚಳಿಗಾಲ ಫೆಬ್ರವರಿಯ ವರೆಗೆ ಇರಲಿದೆ. ಆದರೆ ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ತಡವಾಗಿ ಚಳಿ ಪ್ರಾರಂಭವಾಗಿದೆ. ಸದ್ಯ ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಶೀತಗಾಳಿ ಬೀಸ ಲಾರಂಭಿಸಿದ್ದು, ತೀವ್ರ ಚಳಿಯ ಅನುಭವ ಉಂಟಾಗುತ್ತಿದೆ.

300x250 AD
Share This
300x250 AD
300x250 AD
300x250 AD
Back to top