ಕುಮಟಾ: ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಾನಸಾ ಮಹೇಶ ದೇಶಭಂಡಾರಿ 625 ಕ್ಕೆ 561 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆಗೈದಿದ್ದಾಳೆ.
ಪರೀಕ್ಷೆಯಲ್ಲಿ ಒಟ್ಟೂ ಶೇ. 89.67 ಅಂಕಗಳಿಸಿದ ಈಕೆ, ಪ್ರಾಥಮಿಕ ಶಿಕ್ಷಣವನ್ನು ಕತಗಾಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡೆದಿದ್ದಳು. ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಗುಣಮಟ್ಟವನ್ನು ಎತ್ತಿ ತೋರಿಸಿದ ಇವಳು, ಉದಯವಾಣಿ ಪತ್ರಿಕೆಯ ವಿತರಕ ಹಾಗೂ ಗ್ರಾಮ ಪಂಚಾಯತ ಸದಸ್ಯ ಮಹೇಶ ನಾರಾಯಣ ದೇಶಭಂಡಾರಿ ಅವರ ಪುತ್ರಿಯಾಗಿದ್ದಾಳೆ.
ಇವಳ ಸಾಧನೆಗೆ ಶಾಲೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು, ಪಾಲಕರು, ಜಿ.ಪಂ ನಿಕಟಪೂರ್ವ ಸದಸ್ಯ ಗಜಾನನ ಪೈ ಹಾಗೂ ಗಜು ಪೈ ಅಭಿಮಾನಿ ಬಳಗ ಹರ್ಷ ವ್ಯಕ್ತಪಡಿಸಿದೆ.