• first
  Slide
  Slide
  previous arrow
  next arrow
 • ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

  300x250 AD

  ಕಾರವಾರ: 2022-2 3ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡoತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
  ಜ.13ರವರೆಗೆ ಹೆಚ್ಚುವರಿ ಪಟ್ಟಿಯಲ್ಲಿರುವ ಶಿಕ್ಷಕರು ತಂತ್ರಾಶದಲ್ಲಿ ಆದ್ಯತೆ, ವಿನಾಯಿತಿ ಕೋರಿ ಅರ್ಜಿಯನ್ನು ಸಲ್ಲಿಸಲು, ಪೂರಕ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಕಾಲಾವಕಾಶ ನೀಡಲಾಗಿದೆ. ಜ.12ರಿಂದ 16ರವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ, ಅಂಗೀಕಾರ, ತಿರಸ್ಕಾರಕ್ಕೆ ಅವಕಾಶ ನೀಡಲಾಗಿದೆ. ಜ.16ರಿಂದ 17ರವರೆಗೆ ಶಿಕ್ಷಕರ ಕುಂದುಕೊರತೆ ನಿವಾರಣಾ ಅಧಿಕಾರಿಗಳನ್ನು ಸಂಪರ್ಕಿಸಲು ಅವಧಿ ನೀಡಲಾಗಿದೆ.
  ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರು ಹಂಚಿಕೆಯ ಕೌನ್ಸೆಲಿಂಗ್‌ಗೆ ಅರ್ಹರಿರುವ ಶಿಕ್ಷಕರ ಅಂತಿಮ ಜೇಷ್ಠತಾಪಟ್ಟಿಯನ್ನು ಎಲ್ಲಾ ವೃಂದವಾರು, ಶಾಲಾವಾರು, ವಿಷಯವಾರು ಖಾಲಿ ಹುದ್ದೆಗಳ ಪಟ್ಟಿಯನ್ನು ದಿನಾಂಕ ಜ.23ರಂದು ಪ್ರಕಟವಾಗಲಿದೆ.

  300x250 AD
  Share This
  300x250 AD
  300x250 AD
  300x250 AD
  Back to top