• first
  Slide
  Slide
  previous arrow
  next arrow
 • ಜ.14ಕ್ಕೆ ‘ಇಸ್ಕೂಲು’ ಪುಸ್ತಕ ಲೋಕಾರ್ಪಣೆ

  300x250 AD

  ಬೆಂಗಳೂರು: ವೃತ್ತಿಯಲ್ಲಿ ಶಿಕ್ಷಕಿಯಾಗಿ, ಪ್ರವೃತ್ತಿಯಲ್ಲಿ ಬರಹಗಾರ್ತಿಯಾಗಿರುವ ಅಕ್ಷತಾ ಕೃಷ್ಣಮೂರ್ತಿಯವರ ಇಸ್ಕೂಲು ಪುಸ್ತಕ ಲೋಕಾರ್ಪಣೆ ಸಮಾರಂಭವು ಜ.14ರಂದು ಸಂಜೆ 4.30ಕ್ಕೆ ಇಲ್ಲಿನ ಬಿ.ಎಂ.ಶ್ರೀ ಪ್ರತಿಷ್ಠಾನದ ಕಲಾಭವನದಲ್ಲಿ ನಡೆಯಲಿದೆ.
  ಜನಪ್ರಕಾಶನ, ನಾಡೋಜ ಡಾ.ಬರಗೂರು ಪ್ರತಿಷ್ಠಾನ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಸಂಘದ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಈ ಪುಸ್ತಕ ಲೋಕಾರ್ಪಣೆಗೊಳಿಸಲಿದ್ದು, ಮುಖ್ಯ ಅತಿಥಿಯಾಗಿ ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಉಪಸ್ಥಿತರಿರಲಿದ್ದಾರೆ. ಅಧ್ಯಕ್ಷತೆಯನ್ನು ಪ್ರೊ.ಸುಕನ್ಯಾ ಮಾರುತಿ ವಹಿಸಿಕೊಳ್ಳಲಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕನ್ನಡ ಸಂಘದ ಅಧ್ಯಕ್ಷ ಡಾ.ಬೆಳಕೆರೆ ಲಿಂಗರಾಜಯ್ಯ ವಿಶೇಷ ಉಪಸ್ಥಿತಿ ವಹಿಸಿಕೊಳ್ಳಲಿದ್ದಾರೆ ಎಂದು ಜನಸಂಸ್ಕೃತಿ ಅಧ್ಯಯನ ಮತ್ತು ಪ್ರಕಾಶನದ ಜಿ.ರಾಜಶೇಖರಮೂರ್ತಿ ಆಮಂತ್ರಣದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top