Slide
Slide
Slide
previous arrow
next arrow

ರುಪೇ, ಡೆಬಿಟ್ ಕಾರ್ಡ್,BHIM-UPI ವಹಿವಾಟುಗಳ ಉತ್ತೇಜನಕ್ಕೆ ಅನುಮೋದನೆ

300x250 AD

ನವದೆಹಲಿ: ವಿತ್ತವರ್ಷ 2023 ರಲ್ಲಿ ರುಪೇ, ಡೆಬಿಟ್ ಕಾರ್ಡ್ ಮತ್ತು ಕಡಿಮೆ ಮೌಲ್ಯದ BHIM-UPI ವಹಿವಾಟುಗಳನ್ನು (ವ್ಯಕ್ತಿಯಿಂದ ವ್ಯಾಪಾರಿ) ಉತ್ತೇಜಿಸಲು ರೂ 2,600 ಕೋಟಿ ಪ್ರೋತ್ಸಾಹಕ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಭೂಪೇಂದರ್ ಯಾದವ್, ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು BHIM ಯುಪಿಐ ಬಳಕೆಗೆ ಈ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಯೋಜನೆಯಡಿಯಲ್ಲಿ, ಪ್ರಸಕ್ತ ಹಣಕಾಸು ವರ್ಷದಲ್ಲಿ ರುಪೇ ಮತ್ತು ಯುಪಿಐ ಬಳಸಿ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಮತ್ತು ಇ-ಕಾಮರ್ಸ್ ವಹಿವಾಟುಗಳನ್ನು ಉತ್ತೇಜಿಸಲು ಬ್ಯಾಂಕ್‌ಗಳಿಗೆ ಆರ್ಥಿಕ ಪ್ರೋತ್ಸಾಹವನ್ನು ನೀಡಲಾಗುತ್ತದೆ.

300x250 AD

ಕಳೆದ ವರ್ಷ ತಮ್ಮ ಬಜೆಟ್ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿಜಿಟಲ್ ಪಾವತಿಗೆ ಹಣಕಾಸು ಬೆಂಬಲವನ್ನು ಮುಂದುವರಿಸುವ ಸರ್ಕಾರದ ಉದ್ದೇಶವನ್ನು ಘೋಷಿಸಿದ್ದರು. ಈ ಘೋಷಣೆಗೆ ಅನುಗುಣವಾಗಿ  ಯೋಜನೆಯನ್ನು ರೂಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಫ್ತು, ಸಾವಯವ ಉತ್ಪನ್ನಗಳು ಮತ್ತು ಬೀಜಗಳನ್ನು ಉತ್ತೇಜಿಸಲು ಮೂರು ಹೊಸ ಸಹಕಾರಿ ಸಂಸ್ಥೆಗಳನ್ನು ಸ್ಥಾಪಿಸುವ ಯೋಜನೆಗೂ ಸಂಪುಟ ಸಮಿತಿ ಅನುಮೋದನೆ ನೀಡಿದೆ.

ಕೃಪೆ: http://news13.in

Share This
300x250 AD
300x250 AD
300x250 AD
Back to top