ಸಿದ್ದಾಪುರ: ಇಲ್ಲಿನ ಎಂ.ಜಿ.ಸಿ. ಕಲಾ, ವಾಣಿಜ್ಯ ಮತ್ತು ಜಿ.ಚ್.ಡಿ. ವಿಜ್ಞಾನ ಮಹಾವಿದ್ಯಾಲಯದ ಬಿ.ಎಸ್ಸಿ. ದ್ವಿತೀಯ ವರ್ಷದ ವಿದ್ಯಾರ್ಥಿನಿ ಆಶಿತಾ ಮೇಸ್ತ ಕರಾಟೆಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿದ್ದಾರೆ.
ಈ ಮೂಲಕ ಛತ್ತಿಸ್‌ಗಡದ ಬಿಲಾಸ್‌ಪುರ ಅಟಲ್ ಬಿಹಾರಿ ವಾಜಪೇಯಿ ವಿಶ್ವವಿದ್ಯಾಲಯದಲ್ಲಿ ಜನವರಿ 17ರಿಂದ 22ರವರೆಗೆ ನಡೆಯುವ ಅಂತರ್ ವಿಶ್ವವಿದ್ಯಾಲಯದ ಕರಾಟೆ ಸ್ಪರ್ಧೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿದ್ದಾಳೆ. ಇವಳ ಸಾಧನೆಗೆ ಶಿಕ್ಷಣ ಪ್ರಸಾರಕ ಸಮಿತಿಯ ಚೇರ್‌ಮನ್‌ರವರು, ಉಪಾಧ್ಯಕ್ಷರು, ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ಸರ್ವ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಕರಾಟೆ ವಿಭಾಗ: MGC ಕಾಲೇಜಿನ ವಿದ್ಯಾರ್ಥಿನಿ ಯುನಿವರ್ಸಿಟಿ ಬ್ಲೂ
