ಶಿರಸಿ: ಭಾರತೀಯ ಸಂಸ್ಕೃತಿ, ಹಿಂದೂ ಧರ್ಮದ ವೈಶಾಲ್ಯವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಇಂದಿಗೂ ಯುವಜನರಿಗೆ ಮಾದರಿಯಾಗಿರುವ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿಯ ಅಂಗವಾಗಿ ಆಚರಿಸುವ ರಾಷ್ಟ್ರೀಯ ಯುವ ದಿನಾಚರಣೆಯನ್ನು ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲಿನಲ್ಲಿ ಜ.12ರಂದು ಆಚರಿಸಲಾಯಿತು. ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಶಿಕ್ಷಕ ಸಂತೋಷ ಕೆ. ಆಯ್. ವಿವೇಕಾನಂದರ ವ್ಯಕ್ತಿತ್ವ ಹಾಗೂ ಆದರ್ಶದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿ ರಾಷ್ಟ್ರೀಯ ಯುವ ದಿನದ ಶುಭಾಶಯ ತಿಳಿಸಿದರು. ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
