Slide
Slide
Slide
previous arrow
next arrow

ಯೋಚನೆ ಉತ್ತಮವಾಗಿದ್ದರೆ ಮಾತ್ರ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ: ನ್ಯಾ.ರೇಣುಕಾ ರಾಯ್ಕರ್

300x250 AD

ಕಾರವಾರ: ಯುವಜನತೆಯ ಯೋಚನೆ ಮತ್ತು ಆಲೋಚನೆಗಳು ಉತ್ತಮವಾಗಿರಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಒಬ್ಬ ವ್ಯಕ್ತಿಯು ಉತ್ತಮ ವ್ಯಕ್ತಿತ್ವವನ್ನು ಬೆಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಹೇಳಿದರು.
ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ  ಹಾಗೂ ದಿವೇಕರ ವಾಣಿಜ್ಯ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಕಾನೂನು ಅರಿವು- ನೆರವು ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ತಂದೆ- ತಾಯಿಗಳು ನೀಡಿದ ಸಂಸ್ಕಾರ ಕಠಿಣ ಅನಿಸಬಹುದು ಆದರೆ ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಒಬ್ಬ ಉತ್ತಮ ನಾಗರಿಕರಾಗಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಕೇಶವ ಕೆ.ಜಿ. ಮಾತನಾಡಿ, ಇಂದಿನ ಯುವ ಜನತೆಯಲ್ಲಿ ಕಾಲ ಕಾಲಕ್ಕೆ ಬದಲಾಗುತ್ತಿರುವ ಕಾಯ್ದೆ ಕಾನೂನುಗಳ ಅರಿವು ಇರಬೇಕು ಎಂದರು. ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಅರವಿಂದ ಜಿ.ನಾಯಕ ಮಾತನಾಡಿ, ವಿದ್ಯಾರ್ಥಿಗಳು ಬೇರೆ ಬೇರೆ ವ್ಯಸನಕ್ಕೆ ತುತ್ತಾಗದೆ ಗುಣಮಟ್ಟದ ವಿದ್ಯಯನ್ನು ಪಡೆದು ಕಾನೂನುಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ ಸಮಾಜದಲ್ಲಿ ಆಗುಹೋಗುಗಳನ್ನು ತಿಳಿಯಲು ಸಹಕರಿಯಾಗುತ್ತದೆ ಎಂದರು.
ವಕೀಲ ಎ.ಆರ್.ಡಿಸೋಜ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಆಧುನಿಕ ಯುವಕರಿಗೆ ಸ್ವಾಮಿ ವಿವೇಕಾನಂದರ ಸಂದೇಶ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ವಕೀಲರಾದ ಕವಿತಾ ನಾಯ್ಕರವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ವಿಷಯದಡಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಪದ್ಮರಾಜ ನಾಯ್ಕ, ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಯಶೋಧಾ ಹೆಗಡೆ, ಉಪನ್ಯಾಸಕ ರಾಜೇಶ ಹಾಗೂ ವಿದ್ಯಾರ್ಥಿಗಳು ಇದ್ದರು.

300x250 AD
Share This
300x250 AD
300x250 AD
300x250 AD
Back to top