ಕುಮಟಾ: ಮೈಕ್ರೋ ಪ್ಲಾಸ್ಟಿಕ್ ನಮ್ಮ ದೇಹದೊಳಗೆ ಸೇರಿ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ಲಾಸ್ಟಿಕ್‌ನಿಂದ ಅನೇಕ ಪ್ರಾಣಿಗಳು ನಾಶವಾಗುತ್ತಿವೆ. ಮಾನವನಿಗೂ ಕ್ಯಾನ್ಸರ್ ನಂತಹ ರೋಗಗಳು ಬರುತ್ತವೆ ಎಂದು ಡಾ.ಎ.ವಿ.ಬಾಳಿಗಾ ಕಾಲೇಜಿನ ಉಪನ್ಯಾಸಕಿ ಸುಜಾತಾ ಕಾಮತ್ ನುಡಿದರು.
ಅವರು ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನಲ್ಲಿ ನಡೆದ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಬಟ್ಟೆ ಚೀಲಗಳನ್ನು, ಅಡಿಕೆ ಹಾಳೆಗಳನ್ನು ನಿಸರ್ಗದತ್ತವಾದ ವಸ್ತುಗಳನ್ನು ಉಪಯೋಗಿಸುವಂತೆ ತಿಳಿಹೇಳಿದರು. ಪರಿಸರ ರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಪರಿಸರ ಮಾತೆ ಮುನಿದರೆ ಮನುಷ್ಯನ ಅಳಿವಿಗೆ ಅರೆಕ್ಷಣ ಸಾಕು ಎಂಬುದನ್ನು ಎಲ್ಲರೂ ಮನಗಾಣಬೇಕಾಗಿದೆ ಎಂದರು.
ಮುಖ್ಯಾಧ್ಯಾಪಕ ರೋಹಿದಾಸ ಎಸ್.ಗಾಂವಕರ ಮಾತನಾಡಿ, ಮಾನವ ಪ್ರಕೃತಿಯ ಕೂಸು ಅನುಭವದ ಮಾತಿದು. ಈ ಸ್ಥಾನ ಪ್ರಾಪ್ತಿಯಾಗಿರುವುದು ಅವನ ಮಾನವೀಯತೆಯಿಂದಲ್ಲ, ಬದಲಾಗಿ ಪ್ರಕೃತಿ ಮಾತೆಯ ವರದಿಂದ. ಆದ್ದರಿಂದ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಬಾಲಚಂದ್ರ ಹೆಗಡೆಕರ್, ವಿಶ್ವನಾಥ ಬೇವಿನಕಟ್ಟಿ, ನಾಗರಾಜ ನಾಯಕ, ಮಹಾದೇವ ಗೌಡ, ಬಾಲಚಂದ್ರ ಅಡಿಗೋಣ, ಇಂದಿರಾ ನಾಯಕ, ಜಾನಕಿ ಗೊಂಡ, ಶಿಲ್ಪಾ ನಾಯಕ, ಮದನ ನಾಯಕ, ಕವಿತಾ ಅಂಬಿಗ, ಗೋಪಾಲಕೃಷ್ಣ ಗುನಗಾ, ಗೋವಿಂದ ನಾಯ್ಕ ಉಪಸ್ಥಿತರಿದ್ದರು. ಎನ್.ರಾಮು ಹಿರೇಗುತ್ತಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಮಹಾದೇವ ಗೌಡ ವಂದಿಸಿದರು. ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳೂ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು.