ಕಾರವಾರ: ಜಿಲ್ಲೆಯಲ್ಲಿ ಕೊರೊನಾ ಮೂರನೆ ಅಲೆಯ ಭೀತಿ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದೆ.
ಇದೀಗ ಹೊರ ರಾಜ್ಯವಷ್ಟೇ ಅಲ್ಲ, ಹೊರ ಜಿಲ್ಲೆಗಳಿಂದ ಬರುವವರ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದ್ದು, ಅವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿಗಳು ಸಂಬoಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ನಡುವೆ ಜಿಲ್ಲಾಡಳಿತ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಮೂರನೇಯ ಅಲೆಯನ್ನು ಸಾಧ್ಯವಾದಷ್ಟು ನಿಯಂತ್ರಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದೆ ಇದ್ದರೆ ಮತ್ತಷ್ಟು ಕಠಿಣ ಕ್ರಮಗಳು ಜಾರಿಯಾಗುವ ಸಾಧ್ಯತೆಯಿದೆ.
ಈಗಾಗಲೇ ಗೋವಾದಿಂದ ರಾಜ್ಯಕ್ಕೆ ಬರುವವರಿಗೆ ಎರಡು ಲಸಿಕೆ ಪಡೆದ ಪ್ರಮಾಣಪತ್ರ ಅಥವಾ 72 ಗಂಟೆಯೊಳಗಿನ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಮಾಡಲಾಗಿದೆ. ಅಗತ್ಯಬಿದ್ದರೆ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬರುವವರನ್ನೂ ಕ್ವಾರಂಟೈನ್‍ನಲ್ಲಿಟ್ಟು ಆರ್‍ಟಿಪಿಸಿಆರ್ ತಪಾಸಣೆಗೊಳಪಡಿಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.