ಯಲ್ಲಾಪುರ: ತಾಲೂಕಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ರೋಟರಿ, ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ನ ವಿದ್ಯಾಭಿಯಾನದ ಅಡಿಯಲ್ಲಿ ರೋಟರಿ ಕ್ಲಬ್ ಶಿರಸಿ, ಇನ್ನರ್ ವೀಲ್ ಕ್ಲಬ್ ಆಫ್ ಶಿರಸಿ ಹೆರಿಟೇಜ್ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ವಿದ್ಯಾ ಸೇತು ವಿದ್ಯಾಭಿಯಾನ ಕಾರ್ಯಕ್ರಮವನ್ನು ಡಿಡಿಪಿಐ ದಿವಾಕರ ಶೆಟ್ಟಿ ಉದ್ಘಾಟಿಸಿದರು.
ತಾಲೂಕಿನ 17 ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿದ್ಯಾ ಸೇತು ಬ್ರಿಜ್ ಕೋರ್ಸ್ ಪುಸ್ತಕಗಳನ್ನು ದಾನಿಗಳ ನೆರವಿನೊಂದಿಗೆ ಉಚಿತವಾಗಿ ನೀಡಲಾಯಿತು.
ವಿಶ್ವದರ್ಶನ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಶ್ರೀನಿವಾಸ ಹೆಬ್ಬಾರ, ರೋಟರಿ ಕ್ಲಬ್ ನ ಸಹಾಯಕ ಪ್ರಾಂತಪಾಲಕ ಡಾ.ಕೆ.ವಿ.ಶಿವರಾಮ, ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ಪಾಂಡುರಂಗ ಪೈ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಪ್ರಭು, ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಗುರುರಾಜ ಕುಂದಾಪುರ, ಕಾರ್ಯಕ್ರಮ ಸಂಯೋಜಕ ಡಾ.ರವಿ ಭಟ್ಟ ಬರಗದ್ದೆ ಇತರರು ಭಾಗವಹಿಸಿದ್ದರು.