Slide
Slide
Slide
previous arrow
next arrow

ಜ.29ಕ್ಕೆ ಗ್ರಾಹಕರ ಸಹಕಾರಿ ಸಂಘದ ಅಮೃತ ಮಹೋತ್ಸವ

300x250 AD

ಅಂಕೋಲಾ: ಪಟ್ಟಣದ ಗ್ರಾಹಕರ ಸಹಕಾರಿ ಸಂಘದ ಅಮೃತ ಮಹೋತ್ಸವವು ಜ. 29ರ ಸಂಜೆ 4 ಗಂಟೆಗೆ ಪಟ್ಟಣದ ಜೈಹಿಂದ್ ಹೈಸ್ಕೂಲ್ ಸಭಾಭವನದಲ್ಲಿ ನಡೆಯಲಿದೆ ಎಂದು ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ದತ್ತಾರಾಮ ಜಿ.ಪೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡನೆ ಮಹಾಯುದ್ಧದಿಂದ ಉಂಟಾದ ಕಠಿಣ ಆರ್ಥಿಕ ಪರಿಸ್ಥಿತಿಯ ಕಾಲದಲ್ಲಿ ಸರಕಾರದಿಂದ ಒದಗಿಸಲ್ಪಡುವ ಆಹಾರ ಧಾನ್ಯ ಮತ್ತು ಜೀವನಾವಶ್ಯಕ ವಸ್ತುಗಳನ್ನು ಅಂಕೋಲಾದ ಜನತೆಗೆ ನ್ಯಾಯಯುತ ಬೆಲೆಯಲ್ಲಿ ಪೂರೈಸುವ ಉದ್ದೇಶದಿಂದ 1945ರಲ್ಲಿ ಹುಟ್ಟಿಕೊಂಡ ಗ್ರಾಹಕರ ಸಹಕಾರಿ ಸಂಘವು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಇದೀಗ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ನೀಡಲು ದಾರಿಯಾಗಿದೆ ಎಂದರು.
ಗ್ರಾಹಕರ ಸಹಕಾರಿ ಸಂಘದ ಅಮೃತ ಮಹೋತ್ಸವದ ಅಧ್ಯಕ್ಷ ಅವಿನಾಶ ಗಾಯತೊಂಡೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ, ಜ.29 ರಂದು ನಡೆಯುವ ಅಮೃತ ಮಹೋತ್ಸವವನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸ್ಮರಣಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರವಾರ ಶಾಸಕಿ ರೂಪಾಲಿ ನಾಯ್ಕ, ಪುರಸಭೆಯ ಅಧ್ಯಕ್ಷೆ ಶಾಂತಲಾ ನಾಡಕರ್ಣಿ, ಜಿ.ಪಂ. ಮಾಜಿ ಅಧ್ಯಕ್ಷ ರಮಾನಂದ ನಾಯಕ, ಜೈಹಿಂದ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಪದ್ಮನಾಭ ಪ್ರಭು ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಂಘದ ನಿರ್ದೇಶಕ ಕೃಷ್ಣಕುಮಾರ ಮಹಾಲೆ ಸ್ವಾಗತಿಸಿದರು. ಸಲಹಾ ಸಮಿತಿ ಸದಸ್ಯ ವಸಂತ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಪದ್ಮನಾಭ ಕೇಣಿಕರ, ಏಕನಾಥ ನಾಯ್ಕ, ನೀಲಾ ಬಂಟ, ಗೀತಾ ಮಹಾಲೆ, ಕಾರ್ಯದರ್ಶಿ ಪ್ರಸನ್ನ ಕಾಮತ ಸೇರಿದಂತೆ ಸಂಘದ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ನಿರ್ದೇಶಕ ಪುಂಡ್ಲೀಕ ಕಾಮತ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top