ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅಸ್ಪೃಶ್ಯತೆಯ ಹಾಗೂ ದೌರ್ಜನ್ಯ ತಡೆ ಅಧಿನಿಯಮದ ಬಗ್ಗೆ ಅರಿವು ಮೂಡಿಸಲು ನಾಟಕ ರಚನಾ ತರಬೇತಿಗೆ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜನವರಿ 21ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08382227081 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.