Slide
Slide
Slide
previous arrow
next arrow

ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರೆ ಉತ್ತಮ ಜೀವನ ಸಾಧ್ಯ: ಶ್ರೀನಾಥ ಪೈ

300x250 AD

ಭಟ್ಕಳ: ವಿದ್ಯಾರ್ಥಿಗಳಿಗೆ ಪಿಯುಸಿ ಅಧ್ಯಯನ ಜೀವನದ ಬಹುಮುಖ್ಯ ಘಟ್ಟವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡಿದರೆ ಮುಂದೆ ಉತ್ತಮ ಮಟ್ಟದ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಶ್ರೀಗುರು ಸುಧೀಂದ್ರ ಕಾಲೇಜಿನ ಬಿಸಿಎ ವಿಭಾಗದ ಪ್ರಾಂಶುಪಾಲ ಶ್ರೀನಾಥ ಪೈ ಹೇಳಿದರು.
ಅವರು ಶ್ರೀವೆಂಕಟೇಶ್ವರ ವಿದ್ಯಾವರ್ಧಕ ಸಂಸ್ಥೆ ದಶಮಾನೋತ್ಸವದ ಪ್ರಯುಕ್ತ ಸ್ಪಂದನ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಸರ್ಪನಕಟ್ಟೆಯ ಸರಕಾರಿ ಕಾಲೇಜಿನ ಪಿಯು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀವೆಂಕಟೇಶ್ವರ ವಿದ್ಯಾವರ್ಧಕ ಸಂಘದವರು ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕೆಂಬ ಹಂಬಲದೊoದಿಗೆ ಈ ಮಾರ್ಗದರ್ಶಿ ಶಿಬಿರವನ್ನು ಹಮ್ಮಿಕೊಂಡಿದ್ದು, ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ನನ್ನಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂಬ ಕೀಳರಿಮೆಯನ್ನು ಮೊದಲು ತೆಗೆದು ಹಾಕಿ ಗುರಿ ಸಾಧಿಸಲು ಪ್ರಯತ್ನಿಸಬೇಕು ಎಂದರು.
ವೇದಿಕೆಯಲ್ಲಿ ಸ್ಪಂದನ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ, ಕ್ರಿಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ದೀಪಕ್ ನಾಯ್ಕ, ನಾಮಧಾರಿ ಗುರುಮಠದ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಹಡೀನ್ ಸರಕಾರಿ ಕಾಲೇಜಿನ ಪ್ರಾಂಶುಪಾಲ ಗಜಾನನ ನಾಯ್ಕ, ಮಾಜಿ ಸೈನಿಕ ಶ್ರೀಕಾಂತ ನಾಯ್ಕ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸರಕಾರಿ ಕಾಲೇಜಿನ ಉಪನ್ಯಾಸಕ ಮಂಜುನಾಥ ನಾಯಕ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಶ್ರೀನಾಥ ಪೈ ಮಾರ್ಗದರ್ಶನ ನೀಡಿದರು.

300x250 AD
Share This
300x250 AD
300x250 AD
300x250 AD
Back to top