ಹೊನ್ನಾವರ: ತಾಲೂಕು ಆಟೋ ಮೊಬೈಲ್ ಮತ್ತು ಗ್ಯಾರೇಜ್ ಮಾಲಕರ ಹಾಗೂ ಕಾರ್ಮಿಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಜ.23ರಂದು ಸಂಜೆ 5 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ, ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಸೆಂಥ್ ಇಗ್ನೇಶಿಯಸ್ ಸಮೋಹ ಸಂಸ್ಥೆಯ ನಿರ್ದೇಶಕರಾದ ಮಾರಿಯಾ ಗೊರಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ, ತಹಶೀಲ್ದಾರ ನಾಗರಾಜ ನಾಯ್ಕಡ್, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು, ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂಘಟನೆಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.23ಕ್ಕೆ ಗ್ಯಾರೇಜ್ ಮಾಲಕ, ಕಾರ್ಮಿಕರ ಸಂಘದ ಉದ್ಘಾಟನೆ
