• Slide
  Slide
  Slide
  Slide
  previous arrow
  next arrow
 • ಟ್ರಕ್ ಟರ್ಮಿನಲ್ ನಿರ್ಮಾಣ ಕಾಮಗಾರಿ ಪ್ರಾರಂಭಕ್ಕೆ ಆಗ್ರಹ

  300x250 AD

  ದಾಂಡೇಲಿ: ಕೂಡಲೆ ಟ್ರಕ್ ಟರ್ಮಿನಲ್ ನಿರ್ಮಾಣದ ಕಾಮಗಾರಿಯನ್ನು ಆರಂಭಿಸುವAತೆ ದಾಂಡೇಲಿ ಟ್ರಾನ್ಸ್ಪೋರ್ಟ್ ಅಸೋಸಿಯೇಶನ್ ಅಧ್ಯಕ್ಷ ದಿನೇಶ್ ಹಳದನಕರ ದೇವರಾಜು ಅರಸು ಟ್ರಕ್ ಟರ್ಮಿನಲ್ ಮಂಡಳಿ, ಶಾಸಕರು ಹಾಗೂ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
  ನಗರದ ಹಳಿಯಾಳ ರಸ್ತೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಐದಾರು ವರ್ಷಗಳು ಸಂದರೂ ಈವರೆಗೆ ಟ್ರಕ್ ಟರ್ಮಿನಲ್ ನಿರ್ಮಾಣದ ಕಾಮಗಾರಿ ಆರಂಭವಾಗಿಲ್ಲ. ಟ್ರಕ್ ಟರ್ಮಿನಲ್ ನಿರ್ಮಾಣವಾಗದೇ ಇರುವುದರಿಂದ ಟ್ರಕ್ ಗಳು ರಸ್ತೆ ಬದಿಯಲ್ಲೆ ನಿಲ್ಲಬೇಕಾದ ಅನಿವರ‍್ಯತೆಯಿದ್ದು, ಇದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುವುದರ ಜೊತೆಗೆ ದೂರದ ಊರುಗಳಿಂದ ಕಚ್ಚಾ ವಸ್ತುಗಳನ್ನು ಹೇರಿಕೊಂಡು ಬರುವ ಟ್ರಕ್ ಚಾಲಕರುಗಳಿಗೆ ಸಹ ವಾಹನ ನಿಲುಗಡೆಗೆ ಸೂಕ್ತ ಅವಕಾಶ ಇಲ್ಲದಿರುವುದರಿಂದ ತೀವ್ರ ತೊಂದರೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
  ನಿರ್ಮಾಣ ಕಾಮಗಾರಿ ಆರಂಭವಾಗುತ್ತದೆ ಎಂದು ಕಾದು ಕಾದು ವರ್ಷ ಐದು ಕಳೆದರೂ ಕಾಮಗಾರಿ ಮಾತ್ರ ಇನ್ನೂ ಆರಂಭವಾಗಿಲ್ಲ. ಕೂಡಲೆ ಕಾಮಗಾರಿಯನ್ನು ಆರಂಭಿಸದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top