Slide
Slide
Slide
previous arrow
next arrow

ಅಂಬಿಗರ ಚೌಡಯ್ಯನ ಭಿನ್ನ, ವಿಶಿಷ್ಟ ವ್ಯಕ್ತಿತ್ವದ ವಚನಕಾರರು: ಗಣಪತಿ ಉಳ್ವೇಕರ

300x250 AD

ಕಾರವಾರ: ಶ್ರೀನಿಜಶರಣ ಅಂಬಿಗರ ಚೌಡಯ್ಯನವರು 12ನೇ ಶತಮಾನದ ಶಿವಶರಣರು ಹಾಗೂ ವಚನಕಾರರಾಗಿದ್ದು, ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಉಳ್ಳವರಾಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಹೇಳಿದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು, ಅಂಬಿಗರ ಚೌಡಯ್ಯರವರ ವ್ಯಕ್ತಿತ್ವವನ್ನು ನಾವೆಲ್ಲರು ನಮ್ಮ ಜೀವನದಲ್ಲಿ  ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದರು.
ತಹಶೀಲ್ದಾರ ಆರ್.ವಿ.ಕಟ್ಟಿ ಮಾತನಾಡಿ, ಶ್ರೀರಾಮಚಂದ್ರ ಕುಟುಂಬ ಸಮೇತ ಚೌಡಯ್ಯನವರ ದೋಣಿಯಲ್ಲಿ ನದಿ ದಾಟುತ್ತಿರುವಾಗ ನಡೆದ ಪ್ರಸಂಗವನ್ನು ಮಾರ್ಮಿಕವಾಗಿ ವಿವರಿಸಿದರು. ಪ್ರಾಧ್ಯಾಪಕ ಡಾ.ಮಂಜುನಾಥ ಎನ್.ಅಂಬಿಗ, ಅಂಬಿಗರ ಚೌಡಯ್ಯನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ & ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಾಮಚಂದ್ರ ಕೆ.ಎಮ್., ಅಂಬಿಗ ಸಮಾಜದ ಹಿರಿಯರಾದ ದೇವರಾಯ, ಹೂವಾ ಖಂಡೇಕರ, ದೈಹಿಕ ಶಿಕ್ಷಣ ಶಿಕ್ಷಕ ಮಹಾದೇವ ಎಲ್. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top