• first
  Slide
  Slide
  previous arrow
  next arrow
 • ಫೆ.17ಕ್ಕೆ ಭಟ್ಕಳ ತಾಲೂಕಾ ಸಾಹಿತ್ಯ ಸಮ್ಮೇಳನ

  300x250 AD

  ಭಟ್ಕಳ: ತಾಲೂಕಿನ 10ನೇ ಸಾಹಿತ್ಯ ಸಮ್ಮೇಳನವು ಫೆ.17ರಂದು ಶ್ರೀ ಕ್ಷೇತ್ರ ಮುರ್ಡೇಶ್ವರದಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.
  ನಾಡಿನ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವೂ ಆಗಿರುವ ಮುರುಡೇಶ್ವರದ ಡಾ.ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆಯಲಿರುವ ನುಡಿಸಮ್ಮೇಳನದಲ್ಲಿ ಎಲ್ಲ ಕನ್ನಡ ಮನಸುಗಳು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
  ಪೂರ್ವ ಸಿದ್ಧತಾ ಸಭೆ: ತಾಲೂಕಾ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ಜ.25ರಂದು ಮುಂಜಾನೆ 10 ಗಂಟೆಗೆ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ. ಈ ಸಭೆಗೆ ಸಮಿತಿ ಸದಸ್ಯರು, ಜನಪ್ರತಿನಿದಿಗಳು, ಅಧಿಕಾರಿಗಳು, ತಾಲೂಕಿನ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ಪಾಲ್ಗೊಂಡು ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಗಂಗಾಧರ ನಾಯ್ಕ ಕೋರಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top