• Slide
  Slide
  Slide
  Slide
  previous arrow
  next arrow
 • ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಯಶಸ್ವಿ

  300x250 AD

  ದಾಂಡೇಲಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಡಿ ಹಳೆದಾಂಡೇಲಿಯ ಸ.ಹಿ.ಪ್ರಾ.ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕರ‍್ಯಕ್ರಮವು ಮಂಗಳವಾರ ಯಶಸ್ವಿಯಾಗಿ ಸಂಪನ್ನಗೊoಡಿತು.

  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಳೆದಾಂಡೇಲಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ನಾಗರೇಖಾ ಗಾಂವಕರ ಅವರು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಮತ್ತು ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಇಂಥಹ ಕರ‍್ಯಕ್ರಮಗಳು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಭವಿಷ್ಯದ ಗುರಿಯನ್ನಿಟ್ಟುಕೊಂಡು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.

  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಗರ ಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ಅವರು ಮಾತನಾಡಿ, ಒಂದು ಕಾಲದಲ್ಲಿ ಶಿಕ್ಷಣ ಶ್ರೀಮಂತರ ಸೊತ್ತು ಆಗಿತ್ತು. ಆದರೆ ಈಗ ಶಿಕ್ಷಣ ಎಲ್ಲರ ಸೊತ್ತು ಆಗಿದೆ. ಭವಿಷ್ಯದ ಉನ್ನತಿಗೆ ಮತ್ತು ಆತ್ಮವಿಶ್ವಾಸದ ಬದುಕಿಗೆ ಇಂದು ಶಿಕ್ಷಣ ಅನಿವಾರ್ಯವಾಗಿ ಬೇಕಾಗಿದೆ ಎನ್ನುವುದನ್ನು ಎಲ್ಲರು ಅರಿತು ಉನ್ನತ ಶಿಕ್ಷಣವಂತರಾಗಬೇಕೆoದು ಕರೆ ನೀಡಿದರು

  ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಕಾoತ ನಡಿಗೇರ ಅವರು ಶಿಕ್ಷಣ ಇಲಾಖೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಹಲವಾರು ಅತ್ಯುತ್ತಮ ಕಾರ್ಯಕ್ರಮಗಳನ್ನು ಅನುಷ್ಟಾನ ಪಡಿಸುತ್ತಿದ್ದು, ಈ ಕಾರ್ಯಕ್ರಮಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕೆಂದರು.

  300x250 AD

  ಮುಖ್ಯ ಅತಿಥಿಗಳಾಗಿ ನಗರ ಸಭೆಯ ಸದಸ್ಯೆ ಸುಧಾ ರಾಮಲಿಂಗ ಜಾಧವ್ ಅವರು ಬಾಗವಹಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಸ್ಥಳೀಯರಾದ ವಿಠ್ಠಲ್, ಸಂದೀಪ್ ನಾಯ್ಕ, ವಿದ್ಯಾ, ರೇಣುಕಾ, ಸಂಪನ್ಮೂಲ ವ್ಯಕ್ತಿ ನಾಗರಾಜ್, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಸುರೇಶ್ ನಾಯಕ, ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಸುಲೇಮಾನ್ ಶೇಖ, ಶಾಲೆಯ ಮುಖ್ಯೋಪಾಧ್ಯಯಿನಿ ಮೀನಾಕ್ಷಿ ಗೌಡ, ಶಿಕ್ಷಕಿಯರಾದ ಶೋಭಾ, ಬೇಬಿ, ಕರವೇ ಅಧ್ಯಕ್ಷ ಸಾಧಿಕ್ ಮುಲ್ಲಾ ಮೊದಲಾದವರು ಉಪಸ್ಥಿತರಿದ್ದರು.

  ಕಾರ್ಯಕ್ರಮದಲ್ಲಿ ಮಕ್ಕಳಿಗೆ ವಿವಿಧ ಆಸಕ್ತಿದಾಯಕ ಕಲಿಕಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ನೋಡೆಲ್ ಅಧಿಕಾರಿ ಜಯ ನಾಯ್ಕ ಸ್ವಾಗತಿಸಿದರು. ಸಿ.ಆರ್.ಪಿ ಲಲಿತಾ ನಾಯ್ಕ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

  Share This
  300x250 AD
  300x250 AD
  300x250 AD
  Back to top