ಕಾರವಾರ: ಶುದ್ಧ ಕುಡಿಯುವ ನೀರಿನ ಘಟಕವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವಂತೆ ನೋಡಿಕೊಳ್ಳಬೇಕುಎಂದು ಶಾಸಕಿ ರೂಪಾಲಿ ನಾಯ್ಕ ಪೌರಾಯುಕ್ತರಿಗೆ ಸೂಚನೆ ನೀಡಿದರು.
ನಗರಸಭೆ ವ್ಯಾಪ್ತಿಯ ಸೋನಾರವಾಡದಿಂದ ಪಾದ್ರಿಬಾಗ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಂಕುಸ್ಥಾಪನೆ, ವಿವೇಕಾನಂದ ನಗರ ಹಾಗೂ ಕೋಡಿಬಾಗದ ಪಂಚರಿಷಿವಾಡದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಕಾಮಗಾರಿಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ನಡೆಯುವಾಗ ಸಾರ್ವಜನಿಕರು ಗಮನ ಹರಿಸಬೇಕು ಅದರ ಗುಣಮಟ್ಟ ಬಗ್ಗೆ ಗಮನ ನೀಡಬೇಕು. ಯಾವುದೇ ಲೋಪ ಕಂಡು ಬಂದರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪೌರಾಯುಕ್ತರಿಗೆ ಸೂಚನೆ ನೀಡಿದರು
ನಗರ ಪ್ರದೇಶದ ವಿವಿಧ ವಾರ್ಡ್ಗಳಲ್ಲಿ ಇನ್ನೂ ಅನೇಕ ಕಾಮಗಾರಿಗಳು ನಡೆಯಲಿದೆ. ಜನರ ಅನುಕೂಲಕ್ಕೆ ರಸ್ತೆ ನಿರ್ಮಾಣ, ಚರಂಡಿ ಹೀಗೆ ವಿವಿಧ ಕೆಲಸಗಳು ಆಗಲಿವೆ ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಶಾಸಕ ಗಣಪತಿ ಉಳ್ವೇಕರ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಬಿಜೆಪಿ ನಗರ ಮಂಡಲದ ಅಧ್ಯಕ್ಷರಾದ ನಾಗೇಶ್ ಕುರ್ಡೇಕರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಸುಜಾತಾ ತಾಮ್ಸೆ, ಸದಸ್ಯರು, ಸಾರ್ವಜನಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.