Slide
Slide
Slide
previous arrow
next arrow

ಜ.28ರಿಂದ ಉಳವಿ ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವ: ಈ ಬಾರಿ ಚಕ್ಕಡಿಗಳಿಗಿಲ್ಲ ಅವಕಾಶ

300x250 AD

ಕಾರವಾರ: ಜೊಯಿಡಾ ತಾಲೂಕಿನ ಉಳವಿ ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವ ಜನವರಿ 28 ರಿಂದ ಫೆಬ್ರುವರಿ 8ರ ವರೆಗೆ ನಡೆಯಲಿದೆ. ಫೆಬ್ರುವರಿ 6 ರಂದು ಮಹಾರಥೋತ್ಸವ ಜರುಗಲಿದೆ ಎಂದು ಉಳವಿ ಚೆನ್ನಬಸವೇಶ್ವರ ಟ್ರಸ್ಟ್ ಉಪಾಧ್ಯಕ್ಷ ಸಂಜಯ ಕಿತ್ತೂರು ತಿಳಿಸಿದರು.

ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಥೋತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ವಿವರ: ಜನವರಿ 28 ರಂದು ಬೆಳಗ್ಗೆ 7 ಗಂಟೆಗೆ ಘಟಸ್ಥಲ ಧ್ವಜಾರೋಹಣ, ರಾತ್ರಿ 8 ಗಂಟೆಗೆ ರಥಗಳ ಪೂಜೆ, ಸೀಮೆ ಕಟ್ಟುವುದು, ಮಹಾಪೂಜೆ, ಮಂಗಳಾರತಿ. 29 ರಂದು ಪಲ್ಲಕ್ಕಿ ಉತ್ಸವ, 30 ರಂದು ಸಂಜೆ ಭೂಮಿಪೂಜೆ, ನವಧಾನ್ಯ ಹಾಕುವುದು. 31 ರಂದು ಹುಂಡಿಗಳ ಪೂಜೆ, ಉತ್ಸವಮೂರ್ತಿ ಪ್ರತಿಷ್ಠಾಪನೆ. ಫೆಬ್ರುವರಿ 1 ರಂದು ಪಲ್ಲಕ್ಕಿ ಉತ್ಸವ, ರಕ್ಷಾದೇವಿಯ ಸಣ್ಣರಥೋತ್ಸವ. 2 ರಂದು ವೀರಭದ್ರೇಶ್ವರ ಸಣ್ಣ ರಥೋತ್ಸವ. 3 ರಂದು ಎಲ್ಲಾ ದೇವರ ಸಣ್ಣ ರಥೋತ್ಸವ. 4 ರಂದು ಚತುರ್ದಶಿ, 5 ರಂದು ರಾತ್ರಿ 8 ಗಂಟೆಗೆ ಚೆನ್ನಬಸವೇಶ್ವರರ ರಥಾರೋಹಣ. 6 ರಂದು ಸಂಜೆ 4 ಗಂಟೆಗೆ ಮಹಾರಥೋತ್ಸವ, 7 ರಂದು ಬಯಲು ಕುಸ್ತಿ. 8 ರಂದು ಓಕಳಿ, ಸಣ್ಣರಥೋತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಚಕ್ಕಡಿ ತರದಂತೆ ಮನವಿ: ಪ್ರತಿವರ್ಷ ಉಳವಿ ಚೆನ್ನಬಸವೇಶ್ವರರ ಜಾತ್ರೆಗೆ ಭಕ್ತರು, ಅದರಲ್ಲೂ ರೈತರು ಚಕ್ಕಡಿ ಗಾಡಿಗಳಲ್ಲಿಯೇ ಆಗಮಿಸಿ ವಾರಗಳ ಕಾಲ ಇಲ್ಲಿಯೇ ಉಳಿದುಕೊಂಡು ದೇವರಿಗೆ ವಿವಿಧ ಸೇವೆ ಸಲ್ಲಿಸುತ್ತಿದ್ದರು. ಆದರೆ ಈ ಬಾರಿ ಜಾನುವಾರುಗಳಿಗೆ ಚರ್ಮಗಂಟು ರೋಗ ಎದುರಾಗಿರುವುದರಿಂದ, ಜಾನುವಾರುಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಈ ಬಾರಿ ಚಕ್ಕಡಿಗಳಿಗೆ ನಿರ್ಬಂಧ ವಿಧಿಸಿದೆ. ಹೀಗಾಗಿ ದೇವಸ್ಥಾನ ಸಮಿತಿ ವತಿಯಿಂದಲೂ ಚಕ್ಕಡಿ ಗಾಡಿ ತರದಂತೆ ಎಲ್ಲಾ ಕಡೆ ಪ್ರಚಾರ ಮಾಡಲಾಗಿದೆ. ಈಗಾಗಲೇ ಕರಪತ್ರ ವಿತರಣೆ, ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲಾಡಳಿತದಿಂದ ಕೂಡಾ ಪ್ರಕಟಣೆ ಹೊರಡಿಸಲಾಗಿದೆ. ಜೊತೆಗೆ ಜಾತ್ರೆಯಲ್ಲಿ ಚರ್ಮಗಂಟು ರೋಗದ ಕುರಿತಾಗಿ ಅಲ್ಲಿಗೆ ಬರುವ ರೈತರಿಗೆ ಜಾಗೃತಿ ಮೂಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

300x250 AD

ನೆರೆಯ ಜಿಲ್ಲೆಗಳಾದ ಧಾರವಾಡ ಮತ್ತು ಬೆಳಗಾವಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಭಕ್ತರು ಚಕ್ಕಡಿ ಗಾಡಿಗಳ ಮೇಲೆ ಜಾತ್ರೆಗೆ ಆಗಮಿಸುವ ವಾಡಿಕೆ ಪರಂಪರಾಗತವಾಗಿ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಚರ್ಮ ಗಂಟು ರೋಗ ಇರುವ ಕಾರಣ ಜಿಲ್ಲಾಡಳಿತ ನಿರ್ಭಂದ ಹೇರಿದೆ. ಭಕ್ತರು ಸಹಕಾರ ನೀಡಬೇಕು ಎಂದು ಸಂಘಟಕರು ಕೋರಿದ್ದಾರೆ.

ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ ಇಲ್ಲ: ಜಾತ್ರೆಯ ಸಂದರ್ಭದಲ್ಲಿ ಪ್ರತಿವರ್ಷ ಚೆನ್ನಬಸವ ಪ್ರಶಸ್ತಿಯನ್ನು ನೀಡಲಾಗುತ್ತಿತ್ತು. ಆದರೆ ಕಳೆದ ಎರಡು ವರ್ಷ ಕೋವಿಡ್‌ನಿಂದ ಜಾತ್ರೆಯನ್ನು ಸರಳವಾಗಿ ಮಾಡಲಾಗಿತ್ತು. ಈ ಬಾರಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಉಲ್ಬಣಗೊಂಡಿರುವುದರಿಂದ ಜಾತ್ರೆಯನ್ನು ಅದ್ಧೂರಿಯಾಗಿ ನಡೆಸಬೇಕೆ ಬೇಡವೇ ಎನ್ನುವ ಗೊಂದಲವಿತ್ತು. ಕೊನೆಯ ಕ್ಷಣದಲ್ಲಿ ಜಾತ್ರೆ ನಡೆಸಲು ಅನುಮತಿ ಸಿಕ್ಕಿದೆ. ಹೀಗಾಗಿ ಈ ಬಾರಿಯೂ ಚೆನ್ನಬಸವ ಶ್ರೀ ಪ್ರಶಸ್ತಿ ನೀಡುತ್ತಿಲ್ಲ ಎಂದು ತಿಳಿಸಿದರು.

Share This
300x250 AD
300x250 AD
300x250 AD
Back to top