Slide
Slide
Slide
previous arrow
next arrow

ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ 74ನೇ ಗಣರಾಜ್ಯೋತ್ಸವ ಆಚರಣೆ

300x250 AD

ಶಿರಸಿ: ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿoದ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಎಲ್.ಎಂ. ಹೆಗಡೆ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.ಮುಖ್ಯೋಪಾಧ್ಯಾಯ ಶಾಂತಾರಾಮ್ ನಾಯ್ಕ್ ಗಣರಾಜ್ಯೋತ್ಸವದ ಮಹತ್ವ ತಿಳಿಸಿದರು.ಕಾರ್ಯಕ್ರಮದಲ್ಲಿ ಶಿಕ್ಷಕರು, ಪಾಲಕರು ಮತ್ತು ಮಕ್ಕಳು ಉಪಸ್ಥಿತರಿದ್ದರು. ಧ್ವಜಾರೋಹಣದ ನಂತರ ಸೇವಾದಳ ವಿದ್ಯಾರ್ಥಿಗಳಿಂದ ಡೆಂಬೆಲ್ಸ ಪ್ರದರ್ಶನ ಮತ್ತು ಸೇವಾದಳ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಫರ್ಧೆ ,ಮಹಾಭಾರತ ರಾಮಾಯಣ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಿತು.

300x250 AD
Share This
300x250 AD
300x250 AD
300x250 AD
Back to top