ಹೊನ್ನಾವರ: ಗೇರಸೊಪ್ಪಾ ವಲಯ ಅರಣ್ಯ ಕಛೇರಿ ವ್ಯಾಪ್ತಿಯಲ್ಲಿನ ಅರಣ್ಯ ಸಿಬ್ಬಂದಿಗಳಿಂದ ಅರಣ್ಯವಾಸಿಗಳ ಮೇಲೆ ಜರುಗುತ್ತಿರುವ ದೌರ್ಜನ್ಯ, ಕಿರುಕುಳ ಕ್ಷೇತ್ರಕ್ಕೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಜನವರಿ 29 ರಂದು ರವಿವಾರ ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಸಂಚಾಲಕ ರಾಮ ಮರಾಠಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ, ವಿಚಾರಣೆ ಹಂತದಲ್ಲಿರುವಾಗ ಸರಕಾರ ಅರಣ್ಯವಾಸಿಗಳಿಗೆ ಕಿರುಕುಳ ನೀಡಬಾರದೆಂಬ ಸ್ಪಷ್ಟ ನಿರ್ದೇಶನ ಇದ್ದಾಗಲೂ, ಸ್ಥಳೀಯ ಅರಣ್ಯ ಸಿಬ್ಬಂದಿಗಳು ಪದೇ ಪದೇ ಕೃತ್ಯವೆಸಗುವುದರಿಂದ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಭೆ: ಗೇರಸೊಪ್ಪಾ ವಲಯ ಕಛೇರಿ ವ್ಯಾಪ್ತಿಯ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಜನವರಿ 29, ರವಿವಾರ ಸಂಜೆ 4 ಗಂಟೆಗೆ ಗೇರಸೊಪ್ಪಾ ಸರ್ಕಲ್, ಗೇರಸೊಪ್ಪಾ ಸಭಾಭವನದಲ್ಲಿ ಸಂಘಟಿಸಲಾಗಿದ್ದು, ಫೇಬ್ರವರಿ 10 ರಂದು ಹಮ್ಮಿಕೊಳ್ಳಲಾದ ಬೆಂಗಳೂರು ಚಲೋ ಕಾರ್ಯಕ್ರಮದ ಕುರಿತು ಚರ್ಚಿಸಲಿದ್ದಾರೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.