Slide
Slide
Slide
previous arrow
next arrow

ಮಹಿಳೆಯರಿಗೆ ಸ್ವಾವಲಂಬಿ ಜೀವನ ನೀಡಿದ ಧರ್ಮಸ್ಥಳ ಸಂಘದ ಕಾರ್ಯ ಶ್ಲಾಘನೀಯ: ಸ್ಪೀಕರ್ ಕಾಗೇರಿ

300x250 AD

ಶಿರಸಿ : ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಗ್ರಾಮೀಣ ಭಾಗದ ಮಹಿಳೆಯರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತಿರುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕೆಲಸ ಶ್ಲಾಘನೀಯ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು ಅವರು ನಗರದ ಕರ್ಜಗಿ ಕಲ್ಯಾಣ್ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾದ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ

ಮಹಿಳಾ ಸಬಲೀಕರಣ ಶಿಕ್ಷಣ ಮತ್ತು ಆರ್ಥಿಕ ಸದೃಢತೆಯನ್ನು ಅವಲಂಬಿಸಿದೆ. ಶಿಕ್ಷಣದಿಂದ ಧೈರ್ಯ, ಶಕ್ತಿ, ಸಾಮಾಜಿಕ ಗೌರವ ಮತ್ತು ಆರ್ಥಿಕ ಸದೃಢತೆಯಿಂದ ಕುಟುಂಬದ ಅಭಿವೃದ್ಧಿಯಾಗಲಿದೆ. ಮಹಿಳೆ ಆರ್ಥಿಕವಾಗಿ ಸದೃಢಗೊಳ್ಳಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ರೂಪಿಸಿದ ಯೋಜನೆ ಸಹಕಾರಿಯಾಗಿದೆ. ಸಾಲ ಮರು ಪಾವತಿ ಮತ್ತು ಪ್ರಾಮಾಣಿಕತೆ ವಿಚಾರದಲ್ಲಿ ಮಹಿಳೆಯರು ಮುಂದು ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ವರ್ಷಗಳಿಂದ ಹಳ್ಳಿ, ನಗರ, ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿ ಶಾಖೆಗಳನ್ನು ಹೊಂದಿ ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿ ಬದುಕು ಸಾಗಿಸಲು ಸಶಕ್ತರನ್ನಾಗಿ ಮಾಡುವಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ ಎಂದರು. 

300x250 AD

ಬ್ರಹ್ಮ ಕುಮಾರಿ ವಿಶ್ವ ವಿದ್ಯಾಲಯದ ಉಪನ್ಯಾಸಕಿ ವೀಣಾ ಅವರು ಮಾತನಾಡಿ ಮಹಿಳೆಯರು ಇಂತಹ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಂಡು ತಮ್ಮಲ್ಲಿರುವ ದೃಢ ಮನಸ್ಸು ಹಾಗೂ ಚಾಕಚಕ್ಯತೆಯಿಂದ ಎಲ್ಲ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವುದು ಹರ್ಷದಾಯಕ ಎಂದರು. ಈ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

Share This
300x250 AD
300x250 AD
300x250 AD
Back to top