Slide
Slide
Slide
previous arrow
next arrow

ಅರಣ್ಯಾಧಿಕಾರಿಗಳಿಂದ ಕಿರಿಕಿರಿ; ಪ್ರತಿಭಟನೆಯ ಎಚ್ಚರಿಕೆ

300x250 AD

ಸಿದ್ದಾಪುರ: ತಾಲೂಕಿನಲ್ಲಿ ಸಿದ್ದಾಪುರ ಮತ್ತು ಕ್ಯಾದಗಿ ವಲಯ ಅರಣ್ಯ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿಗಳು ಮತ್ತು ಉಪ ವಲಯ ಅರಣ್ಯಾಧಿಕಾರಿಗಳು ಜನಸಾಮಾನ್ಯರಿಗೆ ಬಹಳ ತೊಂದರೆ ನೀಡುತ್ತಿದ್ದಾರೆ ಮತ್ತು ಕಿರಿಕಿರಿಯನ್ನುಂಟು ಮಾಡುತ್ತಿದ್ದಾರೆ. ಈ ವಿಚಾರವಾಗಿ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಇವರ ಮೇಲೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಪಾದಯಾತ್ರೆ ಮುಖಾಂತರ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯೆದುರು ಧರಣಿ ಕೈಗೊಳ್ಳುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಸಾರ್ವಜನಿಕರಿಗೆ ಅನುಕೂಲವಾಗುವಂತಹ ರಸ್ತೆಯನ್ನು ಮಾಡಲು ಈ ಅರಣ್ಯಾಧಿಕಾರಿಗಳು ಕೊಡುತ್ತಿಲ್ಲ. ರೈತರ ಕೃಷಿ ಜಮೀನಿನ ಕೃಷಿ ಚಟುವಟಿಕೆಗೆ ಬಳಸಲು ಮಣ್ಣು ನೀಡುತ್ತಿಲ್ಲ. ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಗೇರುಸೊಪ್ಪ ಕಡೆಯಿಂದ ಬರುವಂತಹ ಮರಳನ್ನು ತಡೆದು ಬರದೇ ಇರುವಂತೆ ದಂಡವನ್ನು ಹಾಕುತ್ತಿದ್ದಾರೆ. ಅಧಿಕಾರಿಗಳಿಗೆ ಬೇಕಾದಂತಹ ಎಲ್ಲಾ ಅನುಕೂಲಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಜನರಿಗೆ ಬಹಳ ತೊಂದರೆ ಕೊಡುತ್ತಿದ್ದಾರೆ, ಜನರ ಪರವಾಗಿಲ್ಲ. ಅತಿಕ್ರಮಣದಾರರಿಗೆ ಎಲ್ಲಿಲ್ಲದ ಕಿರುಕುಳವನ್ನು ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ತಾಲೂಕಿನಲ್ಲಿ ಕಾಡುಹಂದಿ ಮತ್ತು ಮಂಗಗಳ ಕಾಟದಿಂದ ರೈತರ ಬೆಳೆ ಹಾನಿಯಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ ಕೆಲಸ ಮಾಡುತ್ತಿಲ್ಲ. ಆದರೆ ಜನಸಾಮಾನ್ಯರಿಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ಮರಳು ಬೇಕು. ಆದರೆ ಮಾವಿನಗುಂಡಿ ಚೆಕ್‌ಪೋಸ್ಟ್ನಲ್ಲಿ ಮರಳು ಗಾಡಿಗಳನ್ನ ಬಿಡುತ್ತಿಲ್ಲ. ಮರಳು ಗಾಡಿಗಳನ್ನ ತಡೆದು ದಂಡ ಹಾಕುತ್ತಿದ್ದಾರೆ. ಇದೇರೀತಿ ಈ ವಲಯ ಅರಣ್ಯಾಧಿಕಾರಿಗಳು ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿದ್ದರೆ ನಾವು ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ. ತಕ್ಷಣ ನಮ್ಮ ಭಾಗದ ಶಾಸಕರು, ಜನಪ್ರತಿನಿಧಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಗಮನಹರಿಸಿ ಈ ಅರಣ್ಯಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಈ ವಲಯ ಅರಣ್ಯಾಧಿಕಾರಿಗಳು ಅರಣ್ಯ ಸಂಪತ್ತಿನಲ್ಲಿ ಅರಣ್ಯೀಕರಣ ಎಂಬ ಹೆಸರಿನಲ್ಲಿ ಸಾಕಷ್ಟು ಸರ್ಕಾರದ ಹಣವನ್ನು ಲೂಟಿ ಮಾಡುತ್ತಿದ್ದಾರೆ, ಇದು ತನಿಖೆಯಾಗಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top