Slide
Slide
Slide
previous arrow
next arrow

ಹೊಳಪು ಟ್ರೋಫಿ, ಕ್ರೀಡಾ ಸಮವಸ್ತ್ರ ಅನಾವರಣಗೊಳಿಸಿದ ಶಾಸಕ ದಿನಕರ ಶೆಟ್ಟಿ

300x250 AD

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಶನಿವಾರ ನಡೆಯಲಿರುವ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಫರ್ಧೆಗಳ ಹೊಳಪು 2023 ಪಂಚಾಯತ ಹಬ್ಬದ ಟ್ರೋಫಿ ಮತ್ತು ಕ್ರೀಡಾ ಸಮವಸ್ತ್ರದ ಟಿ-ಶರ್ಟ್ಗಳನ್ನು ಶಾಸಕ ದಿನಕರ ಶೆಟ್ಟಿ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅವರು, ಹೊಳಪು 2023 ಪಂಚಾಯತ ಹಬ್ಬ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕುಮಟಾದಲ್ಲಿ ಆಯೋಜಿಸಿರುವುದು ಸಂತಸದ ವಿಚಾರ. ಪಕ್ಷ ಬೇಧ ಮರೆತು ಗ್ರಾಮ ಪಂಚಾಯ್ತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ 229 ಗ್ರಾ.ಪಂ ಸದಸ್ಯರು, 13 ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ 3116 ಜನಪ್ರತಿನಿಧಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಉತ್ತಮವಾಗಿ ಕಾರ್ಯಕ್ರಮ ಸಂಘಟಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

300x250 AD

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷೆ ಅನುರಾಧಾ ಬಾಳೇರಿ, ಉಪಾಧ್ಯಕ್ಷೆ ಸುಮತಿ ಭಟ್ಟ, ಸದಸ್ಯರಾದ ಪಲ್ಲವಿ ಮಡಿವಾಳ, ಲಕ್ಷ್ಮಿ ಚಂದಾವರ, ಲೊಕೋಪಯೋಗಿ ಇಲಾಖೆ ಅಭಿಯಂತರ ಸುದರ್ಶನ ಹೊನ್ನಾವರ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎoಜಿನಿಯರ್ ರಾಜೇಶ ಮಡಿವಾಳ, ಪಂಚಾಯತರಾಜ್ ಇಲಾಖೆ ಎಂಜಿನಿಯರ್ ಸಂಜು ನಾಯಕ ಸೇರಿದಂತೆ ಮತ್ತಿತರರು ಇದ್ದರು.

Share This
300x250 AD
300x250 AD
300x250 AD
Back to top