• Slide
    Slide
    Slide
    previous arrow
    next arrow
  • ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‌ನಲ್ಲಿ ಹುತಾತ್ಮರ ದಿನಾಚರಣೆ

    300x250 AD

    ಹೊನ್ನಾವರ: ತಾಲೂಕಿನ ಬಂಗಾರಮಕ್ಕಿಯ ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‌ನಲ್ಲಿ ಸೋಮವಾರ ಹುತಾತ್ಮರ ದಿನವನ್ನ ಆಚರಿಸಲಾಯಿತು. ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನಗಳನ್ನರ್ಪಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
    ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಹುತಾತ್ಮರಿಗೆ ನಮನಗಳನ್ನರ್ಪಿಸಿದರು. ಈ ಸಮಯದಲ್ಲಿ ವಿದ್ಯಾರ್ಥಿಗಳು ದೇಶಕ್ಕಾಗಿ ಹುತಾತ್ಮರಾದ ಸ್ವಾತಂತ್ರ್ಯ ಹೋರಾಟಗಾರರ, ವೀರ ಯೋಧರುಗಳ, ಜೀವನಕಥನಗಳನ್ನು ಕಿರು ನಾಟಕದ ಮೂಲಕ ಪ್ರೇಕ್ಷಕರ ಮನಮುಟ್ಟುವಂತೆ ಅಭಿನಯಿಸಿದರು.
    ಕಾರ್ಯಕ್ರಮದಲ್ಲಿ ಶಾಲೆಯ ವಾರ್ಷಿಕ ಕ್ರೀಡಾಕೂಟ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಕಳೆದ ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಯೋಧ ವಿನಾಯಕ ನಾಯ್ಕ ಇವರು ವಿದ್ಯಾರ್ಥಿಗಳೊಂದಿಗೆ ತಮ್ಮ ಸೈನಿಕ ಜೀವನದ ಅನುಭವಗಳನ್ನು ಹಂಚಿಕೊoಡರು. ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳೂ ಹಾಗೂ ಸಂಸ್ಥೆಯ ಅಧ್ಯಕ್ಷರೂ ಆದಂತಹ ಮಾರುತಿ ಗುರೂಜಿಯವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ದೇಶ ಸೇವೆಯ ಮಹತ್ವವನ್ನು ತಿಳಿಸಿ, ಅವರನ್ನು ದೇಶ ಸೇವೆಗಾಗಿ ಸನ್ನದ್ಧರಾಗುವಂತೆ ಪ್ರೇರೇಪಿಸಿದರು.
    ಶಾಲೆಯ ಕಾರ್ಯದರ್ಶಿಗಳಾದ ಅರ್ಪಿತಾ ಮಾರುತಿ ಗುರೂಜಿ, ಆಡಳಿತ ನಿರ್ದೇಶಕ ಜಿ.ಟಿ.ಹೆಗಡೆ ಹಾಗೂ ಶಾಲೆಯ ಪ್ರಾಂಶುಪಾಲರಾದ ಸಾಮಿ ಜಾನ್ ಬೊಸ್ಕೋ ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top