ಅಂಕೋಲಾ: ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಆ ಮೂಲಕ ಭವಿಷ್ಯ ನಿಧಿ ಮತ್ತು ಮಾಸಿಕ ಪಿಂಚಣಿ ಯೋಜನೆ ಜಾರಿಗೆ ಗೊಳಿಸುವ ಕುರಿತು ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ತಾಲೂಕು ಘಟಕದ ವತಿಯಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಂಕೋಲಾದಲ್ಲಿ ಮನವಿಯನ್ನು ಅರ್ಪಿಸಿದರು.
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕಳೆದ 23 ವರ್ಷದಿಂದ ಸ್ಥಾಪಿಸಿದ್ದು ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಶ್ತ್ರೀ ಪುರುಷರು ಹೊಲಿಗೆ ಕೆಲಸಗಾರರಿಗೆ ಜೀವನ ಭದ್ರತೆಯನ್ನು ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಕಳೆದ 22 ವರ್ಷಗಳಿಂದ ಮನವಿ ಹಾಗೂ ಶಾಂತ ರೀತಿಯ ಚಳುವಳಿಗಳ ಮುಖೇನ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಪ್ರಸ್ತುತ ರಾಜ್ಯ ಸರ್ಕಾರವು ಟೈಲರ್ಸ್ ಮಂಡಳಿ ರಚಿಸುವ ಮೂಲಕ ಅಗತ್ಯದ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸುತ್ತೇವೆ.
ಭವಿಷ್ಯ ನಿಧಿ ಹಾಗೂ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಹೊಲಿಗೆ ಕೆಲಸಗಾರರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ನೀಡುವುದು, ಹೊಲಿಗೆ ಕೆಲಸಗಾರರಿಗೆ ವಾಸಕ್ಕಾಗಿ ಮನೆ ನಿರ್ಮಾಣ ಅಥವಾ ದುರಸ್ತಿ ಮಾಡಲು ಹಾಗೂ ಹೊಲಿಗೆ ಯಂತ್ರ ಖರೀದಿಸಲು ಶೇಕಡ ನಾಲ್ಕರಷ್ಟು ಬಡ್ಡಿ ದರದಲ್ಲಿ ಸಾಲವನ್ನು ನೀಡುವುದು ಮತ್ತು ಆರೋಗ್ಯ ವಿಮೆಯನ್ನು ಜಾರಿಗೊಳಿಸುವುದು. ಎಲ್ಲ ಬೇಡಿಕೆಗಳನ್ನ ಪರಿಶೀಲಿಸಿ ಮಸೂದೆಯಲ್ಲಿ ಸೂಕ್ತ ನಿರ್ಣಯ ರೂಪಿಸಿ ಕೂಡಲೇ ಬೇಡಿಕೆಗಳನ್ನ ಈಡೇರಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಂಕೋಲಾ ಘಟಕದ ಅಧ್ಯಕ್ಷ ಮಂಜುನಾಥ್ ನಾಯ್ಕ, ಶ್ರೀಕಾಂತ್ ನಾಯ್ಕ, ಧನಂಜಯ ನಾಯ್ಕ ಸೇರಿದಂತೆ ಹಲವರು ಉಪಸಿತರಿದ್ದರು.